October 17, 2026
Saturday, October 17, 2026
spot_img

ಕೆಜಿ ಕೆಜಿ ಗಾಂಜಾ, ಎಂಡಿಎಂಎ: ಉಡುಪಿಯಲ್ಲಿ ಮಾದಕ ವಸ್ತುಗಳ ಮೇಲೆ ಪೊಲೀಸರ ಬುಲ್ಡೋಜರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:


ಅಂತರರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 2025-26ನೇ ಸಾಲಿನಲ್ಲಿ ದಾಖಲಾದ 17 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ, ಅಂದಾಜು 36.29 ಲಕ್ಷ ರೂಪಾಯಿ ಮೌಲ್ಯದ ನಿಷೇಧಿತ ಮಾದಕ ದ್ರವ್ಯಗಳನ್ನು ನ್ಯಾಯಾಲಯದ ಆದೇಶದಂತೆ ನಂದಿಕೂರಿನ ಆಯುಷ್ ಎನ್ವಿರೋಟೆಕ್ ಘಟಕದಲ್ಲಿ ನಾಶಗೊಳಿಸಲಾಗಿದೆ.


ಇದರಲ್ಲಿ 73.9 ಕೆಜಿ ಗಾಂಜಾ, 15 ಗ್ರಾಂ ಎಂಡಿಎಂಎ ಸೇರಿದಂತೆ ವಿವಿಧ ಮಾದಕ ದ್ರವ್ಯಗಳಿದ್ದವು. ಈ ವೇಳೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಡ್ರಗ್ಸ್ ಹಾವಳಿಯನ್ನು ಬುಡಸಮೇತ ಕಿತ್ತೊಗೆಯಲು ಪೊಲೀಸ್ ಇಲಾಖೆ ಬದ್ಧವಾಗಿದೆ. ಕಳ್ಳಸಾಗಣೆದಾರರು, ಬೆಳೆಗಾರರು ಹಾಗೂ ಮಧ್ಯವರ್ತಿಗಳ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಮುಂದುವರಿಯಲಿದೆ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

ಇದನ್ನೂ ಓದಿ:


ಈ ಪೈಕಿ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಅಂದರೆ ಸುಮಾರು 64 ಕೆಜಿ ಗಾಂಜಾ ವಶಪಡಿಕೊಳ್ಲಲಾಗಿದೆ. ಗಾಂಜಾವನ್ನು ಮುಖ್ಯವಾಗಿ ನೆರೆಯ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಬೆಳೆಯಲಾಗುತ್ತಿದೆ. ಕೇವಲ ಕಳ್ಳಸಾಗಣೆದಾರರನ್ನು ಬಂಧಿಸುವುದಲ್ಲದೆ, ಒಡಿಶಾ ಸೇರಿದಂತೆ ವಿವಿಧ ಕಡೆಗಳಲ್ಲಿರುವ ತೋಟದ ಮಾಲೀಕರು ಮತ್ತು ಮಧ್ಯವರ್ತಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಇದೇ ಸಂದರ್ಭ ಮಾಹಿತಿ ನೀಡಿದರು.

Must Read