ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್-2 ಸಿನಿಮಾ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ.
ಇನ್ನು ಕೆಜಿಎಫ್ ಚಾಪ್ಟರ್ 1 ಗಿಂತ ಚಾಪ್ಟರ್ 2 ಎಲ್ಲೆಡೆ ಅದ್ಧೂರಿ ಓಪನಿಂಗ್ ಪಡೆದುಕೊಂಡಿದ್ದು, ದಾಖಲೆಗಳ ಮೇಲೆ ದಾಖಲೆಗಳನ್ನು ಸೃಷ್ಟಿಸುತ್ತಿದೆ.
— Yash (@TheNameIsYash) April 21, 2022
ಈ ಬಹು ದೊಡ್ಡ ಗೆಲುವಿನ ಅಲೆಯಲ್ಲಿ ತೇಲುತ್ತಿರುವ ನಟ ಯಶ್ ಸಿನಿಮಾ ಗೆಲ್ಲಿಸಿದ ಅಭಿಮಾನಿಗಳಿಗೆ ಭಾವನಾತ್ಮಕ ವಿಡಿಯೋ ಹರಿಬಿಟ್ಟಿದ್ದಾರೆ.
ಚಿಕ್ಕ ಕಥೆಯೊಂದನ್ನು ಹೇಳುವ ಮೂಲಕ ಧನ್ಯವಾದ ಅರ್ಪಿಸಿರುವ ನಟ, ನನಗೆ ತುಂಬಾ ಪ್ರೀತಿ ಮತ್ತು ಅಪಾರ ಆಶೀರ್ವಾದಗಳನ್ನು ನೀಡಿದ್ದಕ್ಕಾಗಿ ನಾನು ಎಲ್ಲರಿಗೂ ಪೂರ್ಣ ಹೃದಯದಿಂದ ಧನ್ಯವಾದಗಳು ಹೇಳುತ್ತೇನೆ ಎಂದಿದ್ದಾರೆ.