ಹೊಸದಿಗಂತ ಡಿಜಿಟಲ್ ಡೆಸ್ಕ್ :
ಟಿಕೆಟ್ ಕೈ ತಪ್ಪಿರುವ ಕಾರಣ ಕೆಜಿಎಫ್ ಬಾಬು ಅಲಿಯಾಸ್ ಯೂಸುಫ್ ಶರೀಫ್ ಬಾಬು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ
ಅವರಿಗೆ ಟಿಕೆಟ್ ಕೈತಪ್ಪಿದ್ದರಿಂದ ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ್ದಾರೆ.
ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವ ಕೆಜಿಎಫ್ ಬಾಬು, “ಇತ್ತೀಚೆಗೆ ನಡೆದ ಕೆಲ ಬೆಳವಣಿಗೆಗಳ ಕಾರಣ ಅಸಮಾಧಾನಗೊಂಡು ಪಕ್ಷ ಬಿಡುತ್ತಿದ್ದೇನೆ” ಎಂದು ತಿಳಿಸಿದ್ದಾರೆ.
ನಿನ್ನೆಯಷ್ಟೇ ಐಟಿ ಅಧಿಕಾರಿಗಳು, ಜಿಎಸ್ಟಿ ಅಧಿಕಾರಿಗಳು, ಚುನಾವಣಾ ಅಧಿಕಾರಿಗಳು, ಮುಂತಾದವರು ಕೆಜಿಎಫ್ ಬಾಬು ನಿವಾಸದ ಮೇಲೆ ದಾಳಿ ಮಾಡಿದ್ದರು. ಈ ಸಂದರ್ಭ ಅಪಾರ ಪ್ರಮಾಣದಲ್ಲಿ ಸೀರೆಗಳು,ಗಿಫ್ಟ್‌ಗಳು, ಗುರುತಿನ ಚೀಟಿ ಪತ್ತೆಯಾಗಿದ್ದವು. ಮೇಲ್ನೋಟಕ್ಕೆ ಅಕ್ರಮ ಎಸಗಿರುವ ಶಂಕೆ ಹಿನ್ನೆಲೆಯಲ್ಲಿ ತನಿಖೆ ಶುರುವಾಗಿತ್ತು. ಈ ಘಟನೆ ನಡೆದ ಬಳಿಕ ಇಂದು ಕಾಂಗ್ರೆಸ್ ಪಕ್ಷಕ್ಕೆ ಕೆಜಿಎಫ್ ಬಾಬು ರಾಜೀನಾಮೆ ಕೊಟ್ಟಿದ್ದಾರೆ.