ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬೆಳೆಗಾರರ ವಿವಿಧ ಬೇಡಿಕೆ ಈಡೇರಿಸುವಂತೆ ಕೆಜಿಎಫ್ ಒತ್ತಾಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಮಡಿಕೇರಿ:

ಕಾಫಿ ಕೃಷಿ ಸಂಬಂಧಿತ ಸಾಲವನ್ನು ಸರ್ಫೇಸಿ-2002 ರ ಕಾಯ್ದೆಯಿಂದ ಹೊರಗಿಡಲು ಸೂಕ್ತ ಕ್ರಮ ಕೈಗೊಳ್ಳುವುದರೊಂದಿಗೆ ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ಬೆಳೆಗಾರರ ಒಕ್ಕೂಟ(ಕೆಜಿಎಫ್) ಕೇಂದ್ರ ಸರಕಾರವನ್ನು ಒತ್ತಾಯಿಸಿದೆ.
ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಡಾ. ಹೆಚ್.ಟಿ.ಮೋಹನ್ ಕುಮಾರ್ ಹಾಗೂ ಸಂಘಟನಾ ಕಾರ್ಯದರ್ಶಿ ಕೆ.ಕೆ.ವಿಶ್ವನಾಥ್‌ ಅವರು ದೆಹಲಿಗೆ ತೆರಳಿ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಪ್ರಮುಖರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಕಾಫಿ ಕೃಷಿ ಸಂಬಂಧಿತ ಸಾಲವನ್ನು ಸರ್ಫೇಸಿ ಕಾಯ್ದೆಯಿಂದ ಹೊರಗಿಡಬೇಕು, ಪ್ಲಾಂಟೇಷನ್‌ಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ದೊರಕಿಸಿಕೊಡಬೇಕು, ಸಾಲದ ಖಾತೆಗಳ ಮರುಹೊಂದಾಣಿಕೆ ಮಾಡಬೇಕು, ಫಸಲ್ ಬಿಮಾ ಯೋಜನೆಯನ್ನು ಕಾಫಿ ಕೃಷಿಗೂ ಅನ್ವಯಿಸಬೇಕು ಮತ್ತು ಎಲ್ಲಾ ರೀತಿ ಕೃಷಿ ಸಾಲಗಳನ್ನು ಸಿಬಿಲ್ ನಿಂದ ಹೊರಗಿಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.
ಅಲ್ಲದೆ ಅಗತ್ಯ ಬಿದ್ದಲ್ಲಿ ಸುಪ್ರಿಂ ಕೋರ್ಟ್ ನಲ್ಲಿ ಬೆಳೆಗಾರರನ್ನು ಸರ್ಫೆಸಿ ವಿಚಾರದಲ್ಲಿ ಪ್ರತಿನಿಧಿಸುವ ಹಿರಿಯ ವಕೀಲರನ್ನು ಭೇಟಿ ಮಾಡಿ ಚರ್ಚಿಸಲಾಯಿತು.
ಒಕ್ಕೂಟದ ಪದಾಧಿಕಾರಿಗಳು ಇದೇ ಸಂದರ್ಭ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಬಸವೇಗೌಡ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪಸಿಂಹ, ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ವಾಣಿಜ್ಯ ಸಚಿವಾಲಯದ ಕಾರ್ಯದರ್ಶಿ ಬಿ.ವಿ.ಆರ್.ಸುಬ್ರಮಣ್ಯಂ, ವಾಣಿಜ್ಯ ಜಂಟಿ ಕಾರ್ಯದರ್ಶಿ ದಿವಾಕರ್‌ನಾಥ್ ಮಿಶ್ರಾ, ಕೇಂದ್ರ ಹಣಕಾಸು ಸಚಿವರ ಆಪ್ತ ಕಾರ್ಯದರ್ಶಿ ನಕುಲ್, ಅವರುಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ಸಾರ್ವಜನಿಕ ಸಂಪರ್ಕ ಪ್ರತಿನಿಧಿ ಟಿ.ಪಿ.ಸುರೇಂದ್ರ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss