ಕೆಜಿಎಫ್ ತಾತ ಕೃಷ್ಣ ಜಿ. ರಾವ್ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಕೆಜಿಎಫ್ ಸಿನಿಮಾದಲ್ಲಿ ತಾತ ಪಾತ್ರ ಮಾಡಿ ಗಮನ ಸೆಳೆದಿದ್ದ ಕೃಷ್ಣ ಜಿ. ರಾವ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಏಕಾಏಕಿ ಆರೋಗ್ಯ ಹದಗೆಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಜಿಎಫ್ ಸಿನಿಮಾದಲ್ಲಿ ಪುಟ್ಟ ಪಾತ್ರ ಮಾಡಿದ್ದರೂ ಅಭಿಮಾನಿಗಳ ಮನಸೆಳೆಯುವ ಅಭಿಯನ ಮಾಡಿದ ಕೃಷ್ಣ ರಾವ್ ಅವರ ಆರೋಗ್ಯ ಸುಧಾರಿಸಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!