ಭಾರತ್‌ ಜೋಡೋ ಯಾತ್ರೆಯಲ್ಲಿ ಕೆಜಿಎಫ್ ಹಾಡು: ಕಾಂಗ್ರೆಸ್ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತ್‌ ಜೋಡೋ ಯಾತ್ರೆಯಲ್ಲಿ ಕೆಜಿಎಫ್ ಚಾಪ್ಟರ್‌ 2(KGF 2) ಸಿನಿಮಾದ ಹಾಡು ಬಳಕೆ ಕುರಿತು ಕಾಂಗ್ರೆಸ್ ವಿರುದ್ಧ ಎಂಆರ್‌ಟಿ ಮ್ಯೂಸಿಕ್‌(MRT Music) ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದು ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಈ ಹಿಂದೆ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ಕೆಜಿಎಫ್ ಸಿನಿಮಾದ ಹಾಡು ತೆಗೆಯುತ್ತೇವೆಂದು ಕಾಂಗ್ರೆಸ್‌ ಮುಚ್ಚಳಿಕೆ ನೀಡಿತ್ತು. ಆದರೆ ಈ ಹಾಡನ್ನು ಇನ್ನೂ ತೆಗೆದಿಲ್ಲ ಎಂದು ಆರೋಪಿಸಿ ಎಂಆರ್‌ಟಿ ಮ್ಯೂಸಿಕ್‌ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ.

ಈ ಅರ್ಜಿಯ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠ ರಾಹುಲ್ ಗಾಂಧಿ, ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್ ಅವರಿಗೆ ನೋಟಿಸ್‌ ಜಾರಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!