ಕೆಜಿಎಫ್, ಕಾಂತಾರ ಸಾಧನೆಯನ್ನು ಕೊಂಡಾಡಿದ ತಮಿಳು ನಟರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇತ್ತೀಚಿನ ದಿನಗಳಲ್ಲಿ ಕನ್ನಡ ಸಿನಿಮಾರಂಗದೆಡೆ (Sandalwood) ಬೆರಗಿನಿಂದ, ಗೌರವದಿಂದ ಎಲ್ಲರು ನೋಡುತ್ತಿದ್ದು, ಅದ್ರಲ್ಲೂ ಕೆಜಿಎಫ್ ಹಾಗೂ ಕಾಂತಾರ ಸಿನಿಮಾಗಳು ಬಂದ ಬಳಿಕ ಮತ್ತಷ್ಟು ಅಭಿಮಾನ ಹೆಚ್ಚಾಗಿದೆ.

ಇದಕ್ಕೆ ಹೊಸ ಉದಾಹರಣೆಯೆಂದರೆ, ನಿನ್ನೆಯಷ್ಟೆ (ಏಪ್ರಿಲ್ 22) ರಂದು ಬೆಂಗಳೂರಿಗೆ ಆಗಮಿಸಿದ್ದ ಪೊನ್ನಿಯಿನ್ ಸೆಲ್ವನ್ 2 (Ponniyin Selvan 2) ತಾರಾಗಣ ಕನ್ನಡ ಚಿತ್ರರಂಗದ ಸಾಧನೆಗಳನ್ನು ಕೊಂಡಾಡಿದರು.

ಮಣಿರತ್ನಂ (Manirathnam) ನಿರ್ದೇಶಿಸಿರುವ ‘ಪೊನ್ನಿಯಿನ್ ಸೆಲ್ವನ್ 2’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ ತಿಂಗಳ 28ರಂದು ವಿಶ್ವದಾದ್ಯಂತ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಉತ್ತರ ಭಾರತದಲ್ಲಿ ಪ್ರಚಾರ ಮುಗಿಸಿರುವ ಚಿತ್ರತಂಡ ದಕ್ಷಿಣದಲ್ಲಿ ಭರದ ಪ್ರಚಾರ ಕಾರ್ಯ ನಡೆಸುತ್ತಿದೆ. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಮೋಷನ್ ಮಾಡಿರುವ ಪಿಎಸ್-2 ಬಳಗ ಬೆಂಗಳೂರಿನಲ್ಲಿ ನಿನ್ನೆ (ಏಪ್ರಿಲ್ 22) ಪ್ರಮೋಷನ್ ಮಾಡಿದೆ. ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಟ ವಿಕ್ರಂ, ತ್ರಿಷಾ, ಕಾರ್ತಿ ಹಾಗೂ ಜಯಂರವಿ ಭಾಗಿಯಾಗಿದ್ದರು.

ಮೊದಲಿಗೆ ಕನ್ನಡಿಗರಿಗೆ ವಂದಿಸಿ ಮಾತಾನಾಡಿದ ನಟ ಜಯಂರವಿ,ಕೆಜಿಎಫ್ ಭಾರತದ ಭಾಷೆ ಗಡಿ ಮುರಿದಿದ್ದರೆ, ಕಾಂತಾರ ಧಾರ್ಮಿಕ ಗಡಿ ಮುರಿದಿದೆ. ಅದರಿಂದ ನಮಗೆ ಧಾರ್ಮಿಕ ನಂಬಿಕೆ ಹೆಚ್ಚಾಗಿದೆ. ಪ್ರಪಂಚದ ಸಿನಿಮಾ ಲೋಕದಲ್ಲಿ ಕನ್ನಡ ಇಂಡಸ್ಟ್ರಿ ಗುರುತರ ಪಾತ್ರ ವಹಿಸಿದೆ ಎಂದರು.

ವಿಕ್ರಂ ಮಾತಾನಾಡಿ, ನನಗೆ ಎಲ್ಲಾ ತರಹ ಪಾತ್ರಗಳನ್ನು ಮಾಡಲು ಇಷ್ಟ. ಆದಿತ್ಯ ಕರಿಕಾಳನ್ ಪಾತ್ರ ನನಗೆ ತೃಪ್ತಿ ಕೊಟ್ಟಿದೆ. ಪಿಎಸ್ 2 ಒಂದೊಳ್ಳೆ ಐತಿಹಾಸಿಕ ಸಿನಿಮಾ. ಪ್ರತಿಯೊಬ್ಬರು ನೋಡಲೇಬೇಕು ಎಂದರು. ಜೊತೆಗೆ ಪ್ರಶ್ನೋತ್ತರ ವೇಳೆಯಲ್ಲಿ ಕೆಲವು ಬಾರಿ ಕಾಂತಾರ ಸಿನಿಮಾವನ್ನು ಉದಾಹರಣೆಯಾಗಿ ತೆಗೆದುಕೊಂಡು ಮಾತನಾಡಿ ಸಿನಿಮಾದ ಗರಿಮೆಯನ್ನು ಮೆರೆದರು.
ಕಲ್ಕಿ ಕೃಷ್ಣಮೂರ್ತಿ ಬರೆದಿರೋ ಕಾದಂಬರಿ ‘ಪೊನ್ನಿಯಿನ್ ಸೆಲ್ವನ್’ ಆಧಾರಿಸಿದ ಸಿನಿಮಾವಿದು. ಸೆಪ್ಟೆಂಬರ್ 30ರಲ್ಲಿ ತೆರೆಕಂಡ ಮೊದಲ ಚಾಪ್ಟರ್ ಮೆಗಾ ಹಿಟ್ ಆಗಿತ್ತು. ಬಾಕ್ಸಾಫೀಸ್‌ನಲ್ಲಿ 500 ಕೋಟಿ ರೂ. ಲೂಟಿ ಮಾಡಿತ್ತು. ಅದೇ ಸಕ್ಸಸ್‌ನಲ್ಲೇ ‘ಪೊನ್ನಿಯಿನ್ ಸೆಲ್ವನ್ 2’ ಸೀಕ್ವೆಲ್ ತೆರೆಗೆ ಬರ್ತಿದೆ. ಚೋಳ ಸಾಮ್ರಾಜ್ಯದ ದೃಶ್ಯವೈಭೋಗದ ಈ ಸಿನಿಮಾ ತಮಿಳು, ತೆಲುಗು, ಕನ್ನಡ, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಏಪ್ರಿಲ್ 28ಕ್ಕೆ ತೆರೆಕಾಣಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!