ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲ್ಯಾಣ ಮಂಟಪಕ್ಕೆ ನುಗ್ಗಿ ಚಿನ್ನಾಭರಣ ದೋಚುತ್ತಿದ್ದ ಇಬ್ಬರು ಕಳ್ಳರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆಯ ಶಾಂತಿನಗರ ನಿವಾಸಿಗಳಾದ ಕಿರಣ್ ನಾಯ್ಕ್ (25) ಮತ್ತು ವಿನೋದ್ ನಾಯ್ಕ್ (23) ಬಂಧಿತ ಆರೋಪಿಗಳು. ವಿವಾಹದ ಸಮಯದಲ್ಲಿ, ಆರೋಪಿಗಳು ಕಲ್ಯಾಣ ಮಂಟಪಕ್ಕೆ ಪ್ರವೇಶಿಸಿ ಕಳ್ಳತನ ಮಾಡಿದ್ದಾರೆ. ಇತ್ತೀಚೆಗೆ ನಿಜಲಿಂಗಪ್ಪ ಬಡಾವಣೆಯ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆಗೆ ನುಗ್ಗಿ ಕಳ್ಳತನ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಸುಮಾರು 73 ಗ್ರಾಂ ತೂಕದ ಮಾಂಗಲ್ಯ ಸರ, ಚೈನ್ ಹಾಗೂ ಎರಡು ಜುಮುಕಿ ಕದ್ದೊಯ್ದಿದ್ದಾರೆ. ಈ ಬಗ್ಗೆ ಬಡಾವಣೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.
7,83,000 ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಕಿರಣ್ ನಾಯಕ್ ಈ ಹಿಂದೆ 12 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.