ಹೊಸದಿಗಂತ ವರದಿ, ತುಮಕೂರು:
ತುಮಕೂರು ಜಿಲ್ಲೆಯ ತಿಪಟೂರು ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕಳ್ಳತನ ನಡೆದಿದೆ. ಸೋಮವಾರ (ಜ. 28) ರಾತ್ರಿ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಕೊಬ್ಬರಿ ಹೊತ್ತೊಯ್ದಿದ್ದಾರೆ . ಎಪಿಎಂಸಿ ಮಾರುಕಟ್ಟೆಯ ಮುಖ್ಯ ದ್ವಾರದ ಬೀಗ, ಗಂಗಾ ಟ್ರೇಡರ್ನ ಕಂಪೌಂಡಿನ ಬೀಗ ಮತ್ತು ಬಾಗಿಲು ಬೀಗ ಮುರಿದು 3,635 ಕೆಜಿ ಕೊಬ್ಬರಿಯನ್ನು ಕಳವು ಮಾಡಲಾಗಿದೆ.
ಕದಿಯಲು ಬಂದ ಕಳ್ಳರು ಚಾಕು ಹಾಗೂ ಖಾರದ ಪುಡಿಯನ್ನು ತಂದಿದ್ದು, ಸಾಕ್ಷ್ಯ ನಾಶ ಮಾಡಲು ಅದನ್ನು ಅಲ್ಲೇ ಚೆಲ್ಲಿ ಹೋಗಿದ್ದಾರೆ. ಕಳ್ಳತನ ಪ್ರಕರಣವು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಸಿಸಿ ಕ್ಯಾಮೆರಾ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.