Saturday, July 2, 2022

Latest Posts

ಕೊರೋನಾ ಅಬ್ಬರದ ನಡುವೆ ಇಲ್ಲಿ ವ್ಯಾಕ್ಸಿನ್ ಮೇಲೆ ಖದೀಮರ ಕಣ್ಣು!

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜಸ್ಥಾನ ರಾಜಧಾನಿ ಜೈಪುರದಲ್ಲಿ ಕೊರೋನಾ ಲಸಿಕೆ ಕಳವುವಾಗಿದ್ದು, 320 ಡೋಸ್​​ ಕೋವ್ಯಾಕ್ಸಿನ್​​​ ಲಸಿಕೆಗಳು ಜೈಪುರದ ಸರ್ಕಾರಿ ಆಸ್ಪತ್ರೆಯಿಂದ ಕಳ್ಳತನವಾಗಿದೆ.
ರಾಜಸ್ಥಾನ ಸರ್ಕಾರ ಈಗಾಗಲೇ ಲಸಿಕೆ ಕೊರತೆ ಎದುರಾಗಿದೆ ಎಂಬ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಇದರ ನಡುವೆಯೇ ಲಸಿಕೆ ಕಳ್ಳತನದ ಪ್ರಕರಣ ಬೆಳಕಿಗೆ ಬಂದಿದೆ.
ಆರೋಗ್ಯ ಇಲಾಖೆ ಅಪರಿತರ ವಿರುದ್ಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದೆ. ಲಸಿಕೆ ಕಳ್ಳತನವಾದ ಬಗ್ಗೆ ದೂರು ಪಡೆದಿರುವ ಪೊಲೀಸರು ತನಿಖೆ ಆರಂಭ ಮಾಡಿದ್ದು, ಆಸ್ಪತ್ರೆಯ ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಇದರೊಂದಿಗೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯನ್ನು ವಿತರಣೆ ನಡೆಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss