ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಕಚೇರಿಯಲ್ಲಿ ಕಳ್ಳತನ ನಡೆದಿದೆ.
ಮಾರ್ಚ್ 16 ರಂದು ಈ ಒಂದು ಕಳ್ಳತನ ನಡೆದಿದ್ದು ಇದೀಗ ತಡವಾಗಿ ಬೆಳಕಿಗೆ ಬಂದಿದೆ.
ಹುಬ್ಬಳ್ಳಿಯ ಜೆಸಿ ನಗರದ ಟೌನ್ ಹಾಲ್ ಕಟ್ಟಡದಲ್ಲಿರುವ ಮಹೇಶ್ ತೆಂಗಿನಕಾಯಿ ಕಚೇರಿಯ ಹಿಂಬಾಗಿಲಿನಿಂದ ಒಳನುಗ್ಗಿ ಕಳ್ಳತನ ನಡೆಸಿದ್ದಾರೆ. ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.