ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆರೋಪಿ ನಟ ದರ್ಶನ್ ಅವರನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ಪೊಲೀಸರು ಸಜ್ಜಾಗಿದ್ದಾರೆ.
ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿಗೆ ತೆರಳಿ ದರ್ಶನ್ ಅವರನ್ನು ವಿಚಾರಣೆಗೆ ಒಳಪಡಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ನ್ಯಾಯಾಲಯದ ಅನುಮತಿ ಮೇರೆಗೆ ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸರು ರಾಜಾತಿಥ್ಯಕ್ಕೆ ಸಂಬಂಧಿಸಿದಂತೆ ಪುರಾವೆಗಳನ್ನು ಸಂಗ್ರಹಿಸಿದ್ದಾರೆ. ಆಗ್ನೇಯ ವಿಭಾಗದ ಠಾಣೆಯ ಪೊಲೀಸರು ಲಭ್ಯವಿರುವ ಸಾಕ್ಷ್ಯಗಳ ಆಧಾರದ ಮೇಲೆ ಪ್ರಕರಣವನ್ನು ಮರುಪರಿಶೀಲಿಸಲು ನಿರ್ಧರಿಸಿದ್ದಾರೆ.