ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಪುಷ್ಪ 2′ ಪ್ರೀಮಿಯರ್ ಶೋ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ಸಂಬಂಧ ಇಂದು ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ಸತತ 4 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.
ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಎಸಿಪಿ ರಮೇಶ್ ಕುಮಾರ್ ನೇತೃತ್ವದಲ್ಲಿ ಅಲ್ಲು ಅರ್ಜುನ್ ಅವರ ವಿಚಾರಣೆ ನಡೆಸಲಾಗಿದೆ. ಕಾಲ್ತುಳಿತ ದುರಂತದ ಬಗ್ಗೆ ಪ್ರಶ್ನೆ ಮಾಡಲಾಗಿದೆ.
ಡಿ.13ರಂದು ಕಾಲ್ತುಳಿತ ಪ್ರಕರಣ ಸಂಬಂಧ ಅಲ್ಲು ಅರ್ಜುನ್‌ರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದರು. ಬೇಲ್ ಸಿಕ್ಕ ಹಿನ್ನೆಲೆ ಅಲ್ಲು ಅರ್ಜುನ್ ರಿಲೀಸ್ ಆಗಿದ್ದರು.