ಸುರತ್ಕಲ್ ಭಾಗದಲ್ಲಿ ಖಾಕಿ ಸರ್ಪಗಾವಲು: ಪಾಝಿಲ್ ಅಂತ್ಯಕ್ರಿಯೆಗೆ ಸಿದ್ಧತೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಗಳೂರು ನಗರದ ಹೊರವಲಯ ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ಹತ್ಯೆಗೀಡಾದ ಮಂಗಲಪೇಟೆ ನಿವಾಸಿ ಮೊಹಮ್ಮದ್ ಫಾಝಿಲ್ ಅಂತ್ಯಕ್ರಿಯೆಗೆ ಸಿದ್ಧತೆ ಆರಂಭವಾಗಿದೆ. ಮೊಯಿದ್ದೀನ್ ಜುಮ್ಮಾ ಮಸೀದಿಯಲ್ಲಿ ಅಂತಿಮ ವಿಧಿವಿಧಾನಗಳು ನೆರವೇರಿದ ಬಳಿಕ ಪ್ರಾರ್ಥನೆ ಸಲ್ಲಿಸಿ ದಫನ ಕಾರ್ಯ ನೆರವೇರಿಸಲಾಗುತ್ತದೆ.

ಇಂದೂ ಕೂಡಾ ಸುರತ್ಕಲ್ ಪರಿಸರದಲ್ಲಿ ಪೊಲೀಸ್ ಸರ್ಪಗಾವಲು ಮುಂದುವರಿದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!