ಖಲಿಸ್ತಾನ್ ನಾಯಕ ಅಮೃತಪಾಲ್ ಸಿಂಗ್ ಬಂಧನ: ಪಂಜಾಬ್​​ನಲ್ಲಿ ಇಂಟರ್ನೆಟ್ ಸ್ಥಗಿತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ವಯಂಘೋಷಿತ ಉಗ್ರಗಾಮಿ ಖಲಿಸ್ತಾನ್ (Khalistan) ಪರ ಸಹಾನುಭೂತಿ ಹೊಂದಿದ್ದ ಅಮೃತಪಾಲ್ ಸಿಂಗ್​​ನ್ನು (Amritpal Singh) ಪಂಜಾಬ್ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಇದಕ್ಕಿಂತ ಮುನ್ನ ಪಂಜಾಬ್ ಪೊಲೀಸರ (Punjab police)ವಿಶೇಷ ತಂಡ ಆತನ ಆರು ಸಹಚರರನ್ನು ಬಂಧಿಸಿದೆ. ನಾಳೆ ಮಧ್ಯಾಹ್ನ 12 ಗಂಟೆಯವರೆಗೆ ರಾಜ್ಯಾದ್ಯಂತ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ.

ಕಳೆದ ವರ್ಷ ಫೆಬ್ರುವರಿಯಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ನಟ ಮತ್ತು ಕಾರ್ಯಕರ್ತ ದೀಪ್ ಸಿಧು ಅವರು ಆರಂಭಿಸಿದ “ವಾರಿಸ್ ಪಂಜಾಬ್ ದೇ” ಎಂಬ ಮೂಲಭೂತ ಸಂಘಟನೆಯನ್ನು ಅಮೃತಪಾಲ್ ಮುನ್ನಡೆಸುತ್ತಿದ್ದಾರೆ. ಏಳು ಜಿಲ್ಲೆಗಳ ಪೊಲೀಸ್ ಸಿಬ್ಬಂದಿ ಅಮೃತಪಾಲ್ ಸಿಂಗ್ ಮತ್ತು ಅವರ ಸಹಚರರನ್ನು ಬೆನ್ನಟ್ಟಿದ್ದು, ಜಲಂಧರ್‌ನ ಶಾಕೋಟ್ ತೆಹಸಿಲ್‌ನ ಮೆಹತ್‌ಪುರ ಗ್ರಾಮದಲ್ಲಿ ಬಂಧಿಸಿದ್ದಾರೆ.

ಪಂಜಾಬ್ ಪೊಲೀಸರು ಟ್ವೀಟ್ ಮೂಲಕ, ಎಲ್ಲಾ ನಾಗರಿಕರಿಗೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ವಿನಂತಿಸಿದ್ದು ಭಯಪಡಬೇಡಿ. ನಕಲಿ ಸುದ್ದಿ ಅಥವಾ ದ್ವೇಷದ ಭಾಷಣವನ್ನು ಹರಡಬೇಡಿ ಎಂದು ಹೇಳಿದ್ದಾರೆ.

ಘರ್ಷಣೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಶ್ರೇಣಿಯ ಅಧಿಕಾರಿ ಸೇರಿದಂತೆ ಆರು ಪೊಲೀಸ್ ಸಿಬ್ಬಂದಿ ಈ ಹಿಂಸಾಚಾರದಲ್ಲಿ ಗಾಯಗೊಂಡಿದ್ದರು. ಹಿಂಸಾಚಾರಕ್ಕಾಗಿ ಅಮೃತಪಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆಯೇ ಎಂಬುದನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!