BIG| ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್‌ನನ್ನು ಗುಂಡಿಕ್ಕಿ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಖಲಿಸ್ತಾನಿಯ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್‌ನನ್ನು ಸೋಮವಾರ ಕೆನಡಾದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಹಲವು ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯಗಳನ್ನು ಎಸಗಿದ ಹರ್ದೀಪ್ ನಿಜ್ಜರ್‌ನನ್ನು ಭಾರತ ಸರ್ಕಾರವು ಮೋಸ್ಟ್ ವಾಂಟೆಡ್ ಖಲಿಸ್ತಾನಿ ಭಯೋತ್ಪಾದಕ ಎಂದು ಘೋಷಿಸಿದೆ. 2022ರಲ್ಲಿ ಜಲಂಧರ್ ನಗರದಲ್ಲಿ ಹಿಂದೂ ಅರ್ಚಕರೊಬ್ಬರ ಹತ್ಯೆಗೆ ಸಂಚು ರೂಪಿಸಿದ ಆರೋಪ ಹೊತ್ತಿರುವ ಹರ್ದೀಪ್ ಸಿಂಗ್ ಬಂಧನಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆ 10 ಲಕ್ಷ ರೂಪಾಯಿ ಬಹುಮಾನ ಕೂಡ ಘೋಷಿಸಿತ್ತು.

ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ಅರ್ಚಕನನ್ನು ಕೊಲ್ಲಲು ಸಂಚು ರೂಪಿಸಿತ್ತು. ಭಾರತದ ವಿರುದ್ಧ ಭಯೋತ್ಪಾದಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ ಪ್ರಕರಣದಲ್ಲಿ ಎನ್ಐಎ ನಿಜ್ಜರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿತ್ತು. ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಪಂಜಾಬಿ ಪ್ರಾಬಲ್ಯದ ನಗರವಾದ ಸರ್ರೆಯಲ್ಲಿರುವ ಗುರುನಾನಕ್ ಸಿಖ್ ಗುರುದ್ವಾರದಲ್ಲಿ ಹರ್ದೀಪ್ ಸಿಂಗ್ ನಿಜ್ಜರ್ನನ್ನು ಗುಂಡಿಕ್ಕಿ ಕೊಲ್ಲಲಾಯಿತು. ಆತ ಸರ್ರೆಯ ಗುರುನಾನಕ್ ಸಿಖ್ ಗುರುದ್ವಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!