ಖಲಿಸ್ತಾನಿ ಉಗ್ರ ಲಖ್ಬೀರ್ ಸಿಂಗ್ ರೋಡೆ ಹೃದಯಾಘಾತದಿಂದ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಾಕಿಸ್ತಾನದ ನಿಷೇಧಿತ ಉಗ್ರ ಸಂಘಟನೆಗಳಾದ ಇಂಟರ್‌ನ್ಯಾಶನಲ್ ಸಿಖ್ ಯೂತ್ ಫೆಡರೇಶನ್ ಮತ್ತು ಖಲಿಸ್ತಾನ್ ಲಿಬರೇಶನ್ ಫೋರ್ಸ್ (ಕೆಎಲ್‌ಎಫ್) ಮುಖ್ಯಸ್ಥ, ಖಲಿಸ್ತಾನಿ ಉಗ್ರ ಲಖ್ಬೀರ್ ಸಿಂಗ್ ರೋಡೆ (72) ಹೃದಯಾಘಾತದಿಂದ ಸಾವಿಗೀಡಾಗಿದ್ದಾನೆ ಎಂದು ವರದಿಯಾಗಿದೆ.

ಲಖ್ಬೀರ್ ಸಿಂಗ್, ಭಾರತದ ‘ಮೋಸ್ಟ್ ವಾಂಟೆಡ್’ ಪಟ್ಟಿಯಲ್ಲಿದ್ದ. ಭಯೋತ್ಪಾದಕ ಜರ್ನೈಲ್ ಸಿಂಗ್ ಭಿಂದ್ರನ್‍ವಾಲೆ ಸೋದರಳಿಯ ಲಖ್ಬೀರ್ ಸಿಂಗ್, ಭಿದ್ರಾನ್‌ವಾಲೆ ಸಾವಿನ ನಂತರ ಪಾಕಿಸ್ತಾನಕ್ಕೆ ಪಲಾಯನ ಮಾಡಿದ್ದ. ಡಿ.2 ರಂದು ಲಖ್ಖೀರ್‌ ಕೂಡ ಮೃತಪಟ್ಟಿದ್ದಾನೆ.

ಸಿಖ್ ಸಂಪ್ರದಾಯಗಳನ್ನು ಅನುಸರಿಸಿ ಉಗ್ರ ಲಖ್ಬೀರ್ ಸಿಂಗ್ ಅಂತಿಮ ವಿಧಿಗಳನ್ನು ಪಾಕಿಸ್ತಾನದಲ್ಲಿ ರಹಸ್ಯವಾಗಿ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!