ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಂಡನ್ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರ ಮೇಲೆ ಖಲಿಸ್ತಾನಿ ಉಗ್ರರು ದಾಳಿಗೆ ಯತ್ನಿಸಿರುವ ಘಟನೆ ನಡೆದಿದೆ.
ಚಾಥಮ್ ಹೌಸ್ ಚಿಂತಕರ ಚಾವಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಂತರ ಕಾರಿನಿಂದ ಇಳಿಯುತ್ತಿದ್ದ ಜೈಶಂಕರ್ ಅವರ ಮೇಲೆ ದಾಳಿಗೆ ಯತ್ನಿಸಿದ್ದಾರೆ.
ಲಂಡನ್ ಪೊಲೀಸ್ ಅಧಿಕಾರಿಗಳ ಮುಂದೆಯೇ ವ್ಯಕ್ತಿಯೊಬ್ಬ ಜೈಶಂಕರ್ ಅವರ ವಾಹನದ ಕಡೆಗೆ ನುಗ್ಗಿ ಭಾರತದ ರಾಷ್ಟ್ರಧ್ವಜವನ್ನು ಹರಿದು ಹಾಕುತ್ತಿರುವುದು ಕಂಡುಬಂದಿದೆ.