June 26, 2026
Friday, June 26, 2026
spot_img

ಖಮೇನಿ ಆರೋಗ್ಯದ ಬಗ್ಗೆ ಬಿಗ್​ ಅಪ್ಡೇಟ್: ಮುಖ ಸುಟ್ಟು ಹೋಗಿದೆ, ಪ್ಲಾಸ್ಟಿಕ್ ಸರ್ಜರಿ ಬೇಕೇ ಬೇಕಂತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್‌ನ ರಾಜಕೀಯ ವಲಯದಲ್ಲಿ ಅನಿಶ್ಚಿತತೆ ಹೆಚ್ಚುತ್ತಿರುವ ನಡುವೆಯೇ, ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯ ಮತ್ತು ಆಡಳಿತ ಶೈಲಿ ಬಗ್ಗೆ ಅಚ್ಚರಿ ಮೂಡಿಸುವ ಮಾಹಿತಿ ಹೊರಬಿದ್ದಿದೆ.

ಮುಖ ಮತ್ತು ಕಾಲಿಗೆ ತೀವ್ರ ಗಾಯಗಳಾಗಿರುವ ಹಿನ್ನೆಲೆಯಲ್ಲಿ ಹಲವು ಶಸ್ತ್ರಚಿಕಿತ್ಸೆಗಳು ನಡೆದಿದ್ದು, ಕೃತಕ ಕಾಲು ಜೋಡಣೆಗಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ. ವಿಶೇಷವೆಂದರೆ, ಇಂತಹ ಪರಿಸ್ಥಿತಿಯಲ್ಲೂ ಅವರು ಕೈಬರಹದ ಸಂದೇಶಗಳ ಮೂಲಕ ಆಡಳಿತ ನಡೆಸುತ್ತಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.

ಇದನ್ನೂ ಓದಿ:

ಇಷ್ಟೇ ಅಲ್ಲದೆ ಅವರ ಮುಖ ಮತ್ತು ತುಟಿಗಳ ಮೇಲೆ ತೀವ್ರವಾದ ಗಾಯಗಳಾಗಿದ್ದು, ಅವರಿಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ. ಸಹಜ ಸ್ಥಿತಿಗೆ ಬರಬೇಕಾದರೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಲೇ ಬೇಕು ಎನ್ನಲಾಗಿದೆ.

ಇದರ ನಡುವೆ ಮಸೌದ್ ಪೆಜೆಶ್ಕಿಯಾನ್ ಮತ್ತು ಅಬ್ಬಾಸ್ ಅರಗ್ಚಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ನಾಯಕತ್ವದೊಳಗಿನ ಭಿನ್ನಾಭಿಪ್ರಾಯಗಳು ಮತ್ತು ಭದ್ರತಾ ಆತಂಕಗಳು ಇರಾನ್‌ನ ಭವಿಷ್ಯದ ಬಗ್ಗೆ ಅನಿಶ್ಚಿತತೆ ಹೆಚ್ಚಿಸಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !