ದೆಹಲಿಯಲ್ಲಿ ಮಹತ್ವದ ಸಭೆ ಕರೆದ ಖರ್ಗೆ: ಇಂದು ಕಾಂಗ್ರೆಸ್ ನಿಂದ ಮೂರನೇ ಪಟ್ಟಿ ರಿಲೀಸ್?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೂರು ಪಕ್ಷಗಳು ಅಭ್ಯರ್ಥಿಗಳ ಘೋಷಣೆ ಮಾಡುತ್ತಿದ್ದು, ,ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ 2 ಪಟ್ಟಿ ಪ್ರಕಟಗೊಳಿಸಿದೆ. ಇದೀಗ 3ನೇ ಪಟ್ಟಿ ಬಿಡುಗಡೆಗೆ ತಯಾರಿ ನಡೆಸಿದೆ .

ಬಾಕಿ ಉಳಿದಿರುವ 58 ಕ್ಷೇತ್ರಗಳ ಪೈಕಿ 30 ಕ್ಷೇತ್ರಗಳಿಗೆ 3ನೇ ಪಟ್ಟಿಯಲ್ಲಿ ಹೆಸರು ಘೋಷಿಸಲು ಕಾಂಗ್ರೆಸ್ ಮುಂದಾಗಿದೆ. ಇದಕ್ಕಾಗಿ ಇಂದು(ಏ.13) ಸಂಜೆ 7.30ಕ್ಕೆ ದೆಹಲಿಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಕರೆಯಲಾಗಿದೆ.

ಕಾಂಗ್ರೆಸ್ ನಾಯಕರಾದ ಕೆಸಿ ವೇಣುಗೋಪಾಲ್, ರಂದೀಪ್ ಸುರ್ಜೆವಾಲ, ಮಕುಲ್ ವಾಸ್ನಿಕ್ ಸೇರಿದಂತೆ ರಾಜ್ಯ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಚರ್ಚೆ ನಡೆಯಲಿದೆ.

3ನೇ ಪಟ್ಟಿಯಲ್ಲಿ 30 ಕ್ಷೇತ್ರಗಳಿಗೆ ಹೆಸರು ಅಂತಿಮಗೊಳಿಸುವ ಸಾಧ್ಯತೆ ಇದೆ. ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಪ್ರಕಟಿಸಿತ್ತು. ಬಳಿಕ 2ನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿತ್ತು.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ ತೀವ್ರ ತಲೆನೋವು ತಂದಿದೆ. ಹಲವು ಜಿಲ್ಲೆಗಳಲ್ಲಿ ಬಂಡಾಯ ಕಾಣಿಸಿಕೊಂಡಿದೆ. ಹೀಗಾಗಿ ಮತ್ತೆ ಮೂರನೇ ಪಟ್ಟಿ ಬಿಡುಗಡೆಗೊಂಡ ಬೆನ್ನಲ್ಲೇ ಮತ್ತಷ್ಟು ಆಕ್ರೋಶ ವ್ಯಕ್ತವಾಗುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!