Thursday, December 8, 2022

Latest Posts

ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ ಆಯ್ಕೆ, ಬೆಂಗಳೂರಿನಲ್ಲಿ ಅಭಿನಂದನಾ ಸಮಾರಂಭ: ಸಯೀದ್ ಅಹ್ಮದ್

ಹೊಸದಿಗಂತ ವರದಿ ಶಿವಮೊಗ್ಗ:

ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ ಆಗಿರುವ ಹಿನ್ನೆಲೆಯಲ್ಲಿ ನವೆಂಬರ್ 06 ರಂದು ಬೆಂಗಳೂರಿನ ಪ್ಯಾಲೇಸ್ ಮೈದಾನದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಯೀದ್ ಅಹ್ಮದ್ ತಿಳಿಸಿದರು.
ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಅಂದು ಮಧ್ಯಾಹ್ನ 3 ಕ್ಕೆ ಅಭಿನಂದನಾ ಸಮಾರಂಭ ನಡೆಯಲಿದೆ. ರಾಜ್ಯಾದ್ಯಂತ 1.5 ಲಕ್ಷಕ್ಕೂ ಅಕ ಕಾಂಗ್ರೆಸ್ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ 15,000 ಕ್ಕೂ ಅಕ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಪ್ರಾಥಮಿಕ ಹಂತದಿಂದ ಮೇಲೆ ಬಂದವರು. ಕಳೆದ 50 ವರ್ಷಗಳಿಂದ ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಈಗ ರಾಹುಲ್ ಗಾಂ ಅವರೇ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಕುಟುಂಬ ಪಕ್ಷ ಎಂಬ ಬಿಜೆಪಿ ಆರೋಪಕ್ಕೆ ತಕ್ಕ ಉತ್ತರ ನೀಡಿದಂತಾಗಿದೆ. ಬೇರೆಯವರೂ ಅಧ್ಯಕ್ಷರಾಗಲು ಸಾಧ್ಯ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಚಂದ್ರಭೂಪಾಲ್, ರೇಖಾ ರಂಗನಾಥ, ಮುಜೀಬ್, ಚಂದ್ರಶೇಖರ್, ಚಂದನ್, ಖಲೀಂ ಪಾಷಾ ಸುದ್ದಿಗೋಷ್ಟಿಯಲ್ಲಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!