ಜಿ20 ಔತಣಕೂಟಕ್ಕೆ ಖರ್ಗೆಗೆ ಆಹ್ವಾನ ನೀಡಿಲ್ಲ ಎಂದು ರಾಜಕೀಯ ಮಾಡಲು ಹೊರಟ ಕಾಂಗ್ರೆಸ್ ಗೆ ಮುಖಭಂಗ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಿ20 ಔತಣಕೂಟಕ್ಕೆ ಮಲ್ಲಿಕಾರ್ಜುನ ಖರ್ಗೆಗೆ ಆಹ್ವಾನ ನೀಡಿಲ್ಲ ಎಂದು ಅಂತಾರಾಷ್ಟ್ರೀಯ ಸಮ್ಮೇಳನದ ನಡುವೆ ಕಾಂಗ್ರೆಸ್ ರಾಜಕೀಯ ಮಾಡಲು ಹೊರಟು ಇದೀಗ ಪೇಚಿಗೆ ಸಿಲುಕಿದೆ.

ಜಿ20 ಜಿ20 ನಾಯಕರಿಗೆ ಆಯೋಜಿಸಿರುವ ಔತಣಕೂಟಕ್ಕೆ ಖರ್ಗೆಗೆ ಆಹ್ವಾನ ನೀಡಿಲ್ಲ ಎಂದು ಕಾಂಗ್ರೆಸ್ ನಾಯಕರು ವಾಕ್ಸಮರ ಶುರುಮಾಡಿದ್ದಾರೆ. ಆದರೆ ರಾಷ್ಟ್ರಪತಿ ಆಹ್ವಾನಿಸಿರುವ ಜಿ20 ಔತಣಕೂಟಕ್ಕೆ ರಾಜಕೀಯ ಮುಖಂಡರಿಗೆ ಆಹ್ವಾನ ನೀಡಿಲ್ಲ. ಖರ್ಗೆ ಮಾತ್ರವಲ್ಲ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೂ ಆಹ್ವಾನ ನೀಡಿಲ್ಲ. ಆದರೆ ಕಾಂಗ್ರೆಸ್ ಮಾತ್ರ ಈ ವಿಚಾರದಲ್ಲಿ ರಾಜಕೀಯ ಪ್ರದರ್ಶಿಸಿ ತೀವ್ರ ಮುಖಭಂಗಕ್ಕೆ ಒಳಗಾಗಿದೆ.

ದ್ರೌಪದಿ ಮುರ್ಮು ಇಂದು ರಾತ್ರಿ ಆಯೋಜಿಸಿರುವ ಜಿ20 ನಾಯಕರುಗಳ ಔತಣಕೂಟಕ್ಕೆ ದೇಶದ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಆದರೆ ಪ್ರಮುಖ ಅಥಿತಿಗಳ ಪೈಕಿ ರಾಜ್ಯಸಭೆಯ ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಲಾಗಿಲ್ಲ. ಬಿಜೆಪಿ ದಲಿತರನ್ನು ದಮನ ಮಾಡುತ್ತದೆ. ದಲಿತರಿಗೆ ಯಾವುದೇ ಸ್ಥಾನ ಮಾನ ನೀಡುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ದಲಿತ ಅನ್ನೋ ಕಾರಣಕ್ಕೆ ಆಹ್ವಾನ ನೀಡಿಲ್ಲ ಎಂದು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ದ ಮುಗಿಬಿದ್ದಿತ್ತು. ಆದರೆ ಖರ್ಗೆ ರೀತಿ ಜೆಪಿ ನಡ್ಡಾ ಕೂಡ ಮತ್ತೊಂದು ಪ್ರಮುಖ ಪಕ್ಷ ಹಾಗೂ ಆಡಳಿತ ಪಕ್ಷದ ಅಧ್ಯಕ್ಷರಾಗಿದ್ದಾರೆ. ಜೆಪಿ ನಡ್ಡಾಗೂ ಆಹ್ವಾನ ನೀಡಿಲ್ಲ ಅನ್ನೋದು ಬಹಿರಂಗವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕರು ಸೈಲೆಂಟ್ ಆಗಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಜೆಪಿ ನಡ್ಡಾ ಪ್ರಮುಖ ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರಾಗಿದ್ದಾರೆ. ಪಕ್ಷದೊಳಗೆ ಅತೀ ದೊಡ್ಡ ಹುದ್ದೆ ಅಲಂಕರಿಸಿದ್ದಾರೆ. ಆದರೆ ವಿಪಕ್ಷ ನಾಯಕ, ಅಥವಾ ಸರ್ಕಾರದ ಯಾವುದೇ ಸಮಿತಿ ಸೇರಿದಂತೆ ಆಹ್ವಾನಿತ ಗಣ್ಯರ ಮಾನದಂಡಗಳಲ್ಲಿ ಜೆಪಿ ನಡ್ಡಾ ಆಗಲಿ, ಖರ್ಗೆಯಾಗಲಿ ಇಲ್ಲ. ಹೀಗಾಗಿ ಈ ನಾಯಕರಿಗೆ ಆಹ್ವಾನ ನೀಡಿಲ್ಲ. ಈ ವಿಚಾರವನ್ನು ಕಾಂಗ್ರೆಸ್ ರಾಜಕೀಯ ಮಾಡಿ ಇದೀಗ ಪೇಚಿಗೆ ಸಿಲುಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!