ಖರ್ಗೆಯವರೇ ನಮಗಲ್ಲ ನಿಮ್ಮ ‘ಪಪ್ಪು’ವಿಗೆ ಉಪನ್ಯಾಸ ನೀಡಿ: ರಾಹುಲ್ ಗಾಂಧಿ ವಿರುದ್ಧ ರವನೀತ್ ಸಿಂಗ್ ಬಿಟ್ಟು ಟೀಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಬೆನ್ನಲ್ಲೇ ರಾಹುಲ್ ಗಾಂಧಿಯನ್ನು ನಂಬರ್ ಒನ್ ಭಯೋತ್ಪಾದಕ ಎಂದು ಹೇಳಿದ್ದ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಮತ್ತೊಮ್ಮೆ ಪಪ್ಪು ಎಂದು ಗೇಲಿ ಮಾಡಿದ್ದಾರೆ.

ಕಾಂಗ್ರೆಸ್​​ ರಾಹುಲ್​ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿದೆ. ಆದರೆ ಅವರು ಪಪ್ಪು ಆಗಿಯೇ ಉಳಿದಿದ್ದಾರೆ ಎಂದು ಬಿಟ್ಟು ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಸಂಸದರಾಗಿದ್ದು, ಇಂದು ದೇಶದ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಆದರೆ ಪಪ್ಪು ಪಪ್ಪು ಆಗಿಯೇ ಉಳಿದಿದ್ದಾರೆ. ಪಪ್ಪು ಇನ್ನೂ ಮಗು, ಯಾರ ಕೈಯಲ್ಲಿ ಆಟವಾಡುತ್ತಿದ್ದಾನೆ ಎಂಬುದು ನಮಗೆ ತಿಳಿದಿಲ್ಲ. ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಮಗೆ ಉಪನ್ಯಾಸ ನೀಡುವ ಬದಲು ಪಪ್ಪುಗೆ ಕಲಿಸಬೇಕು. ರಾಹುಲ್​ ಗಾಂಧಿ ಅವರು ನಿರಂತರವಾಗಿ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸುತ್ತಾರೆ ಎಂದು ರವನೀತ್​ ಸಿಂಗ್​ ಹೇಳಿದರು.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆಗಾಗ್ಗೆ ಸಿಖ್ಖರ ವಿರುದ್ಧ ಮಾತನಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರ ಕುಟುಂಬ ಸಿಖ್ಖರ ಮೇಲಿನ ದಾಳಿಗೆ ಹೆಸರುವಾಸಿಯಾಗಿದೆ. ಅಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಸಿಖ್ಖರ ಮೇಲೆ ನಿರಂತರ ದಾಳಿಗಳು ನಡೆಯುತ್ತಿದ್ದವು. ನಾಯಕನಾಗಿ ಅಥವಾ ಸಚಿವನಾಗಿ ನಾನು ರಾಹುಲ್ ಗಾಂಧಿ ಬಗ್ಗೆ ಈ ಮಾತನ್ನು ಹೇಳಿಲ್ಲ. ಬದಲಿಗೆ ನಾನು ಸಿಖ್ ಆಗಿರುವುದರಿಂದ ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಎಫ್‌ಐಆರ್‌ ದಾಖಲಿಸಿದರೆ ನನಗೇನು ತೊಂದರೆಯಿಲ್ಲ ಎಂದಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಎನ್‌ಡಿಎ ನಾಯಕರು ಮಾಡಿರುವ ಹೇಳಿಕೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತರಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!