ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಹಲವಾರು ವಿಷಯಗಳ ಬಗ್ಗೆ ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶನ ಕರೆಯಬೇಕೆಂಬ ವಿರೋಧ ಪಕ್ಷದ ಸರ್ವಾನುಮತದ ವಿನಂತಿಯನ್ನು ಪುನರುಚ್ಚರಿಸಿದ್ದಾರೆ.
ಪತ್ರದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂದೂರ ಮತ್ತು ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳಿಂದ ಯುದ್ಧ ನಿಲುಗಡೆ ಘೋಷಣೆ ಸೇರಿವೆ.
“ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂದೂರ ಮತ್ತು ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳಿಂದ ಕದನ ವಿರಾಮ ಘೋಷಣೆಗಳನ್ನು ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವಂತೆ ಪ್ರಧಾನಿ ಶ್ರೀ @narendramodi ಅವರಿಗೆ ನಾನು ಪತ್ರ ಬರೆದಿದ್ದೀನಿ” ಎಂದು ಬರೆದಿದ್ದಾರೆ.
ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ ಕೂಡ ಭಾರತ ಮತ್ತು ಪಾಕಿಸ್ತಾನ ನಡುವಿನ ಘಟನೆಗಳ ಸರಪಳಿಯ ಕುರಿತು ಸಂಸತ್ತಿನ ಅಧಿವೇಶನವನ್ನು ನಡೆಸಬೇಕೆಂದು ಒತ್ತಾಯಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಯುದ್ಧ ನಿಲುಗಡೆಯನ್ನು ಹೇಗೆ ಘೋಷಿಸಿದರು ಎಂಬುದರ ಕುರಿತು ವಿರೋಧ ಪಕ್ಷಗಳಿಗೆ ತಿಳಿಸಬೇಕು ಎಂದು ಶ್ರೀನಾಟೆ ತಿಳಿಸಿದ್ದಾರೆ.