ಹೊಸದಿಗಂತ ಡಿಜಿಟಲ್ ಡೆಸ್ಕ್:
ನವ ಭಾರತ ನಿರ್ಮಾಣಕ್ಕೆ ಕಾಂಗ್ರೆಸ್ ಮುಕ್ತ ಭಾರತ ಬೇಕು ಎಂದು ಹೇಳುತ್ತಿದ್ದಾರೆ. ನಾವು ಈ ನವ ಭಾರತ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಬುಧವಾರ ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ಅವರು, ನವ ಭಾರತ ನಿರ್ಮಾಣದಲ್ಲಿ ಹಸಿವು, ಮಾಲಿನ್ಯ ಹೆಚ್ಚಾಗಿ, ರೂಪಾಯಿ ಮೌಲ್ಯ ಕುಸಿಯುತ್ತಿದೆ. ಹೀಗಾಗಿ ನವ ಭಾರತ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಅವರು, ಅಧಿಕಾರ ನಡೆಸಬೇಕಿರುವ ಸರ್ಕಾರ ನಿದ್ರೆ ಮಾಡುತ್ತಿದೆ. ಸಿಬಿಐ, ಇಡಿ ಮತ್ತು ಐಟಿ ಮಾತ್ರ ದಿನದ 24 ಗಂಟೆಗಳ ಕಾಲ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.
ನವ ಭಾರತ ನಿರ್ಮಾಣದಲ್ಲಿ ಹಸಿವು ಹಾಗೂ ಮಾಲಿನ್ಯ ಹೆಚ್ಚಾಗುತ್ತಿದೆ. ರುಪಾಯಿ ಮೌಲ್ಯ ಕುಸಿಯುತ್ತಿದೆ. ಹೀಗಾಗಿ ಆ ನವ ಭಾರತ ನಿರ್ಮಾಣಕ್ಕೆ ನಾವು ಅವಕಾಶ ನೀಡುವುದಿಲ್ಲ. ಇದರ ವಿರುದ್ಧ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ ಎಂದು ಅವರು ಹೇಳಿದರು.