ತರಕಾರಿ ಮಾರುವವರ ವೇಷದಲ್ಲಿ ಬಂದು ಮನೆಗೆ ಕನ್ನ ಹಾಕಿದ ಖತರ್ನಾಕ್ ಗ್ಯಾಂಗ್ ಅರೆಸ್ಟ್

ಹೊಸ ದಿಗಂತ ವರದಿ, ಬೆಳಗಾವಿ: ತರಕಾರಿ ಮಾರುವವರ ವೇಷದಲ್ಲಿ ಬಂದು ಮನೆಗಳಲ್ಲಿ ಕಳ್ಳತನ ನಡೆಸುತ್ತಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್ ಅನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಪ್ರತ್ಯೇಕ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಮೂಲದವರು ಎಂದು ತಿಳಿದುಬಂದಿದೆ. ಕಳ್ಳತನಕ್ಕೂ ಮೊದಲು ಏರಿಯಾಗಳಲ್ಲಿ ತರಕಾರಿ ಮಾರುವವರ ವೇಷದಲ್ಲಿ ಓಡಾಟ ನಡೆಸುತ್ತಿದ್ದ ಆರೋಪಿಗಳು, ಈ ವೇಳೆ ಬೀಗ ಹಾಕಿದ ಮನೆಗಳನ್ನು ಪತ್ತೆ ಮಾಡಿ ಬಳಿಕ ರಾತ್ರಿ … Continue reading ತರಕಾರಿ ಮಾರುವವರ ವೇಷದಲ್ಲಿ ಬಂದು ಮನೆಗೆ ಕನ್ನ ಹಾಕಿದ ಖತರ್ನಾಕ್ ಗ್ಯಾಂಗ್ ಅರೆಸ್ಟ್