June 6, 2026
Saturday, June 6, 2026
spot_img

ದೇಶದ ಯುವ ಕ್ರೀಡಾ ಪ್ರತಿಭೆಗಳಿಗೆ ಖೇಲೋ ಇಂಡಿಯಾ ದಾರಿದೀಪ: ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೇಶದ ಯುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಲು ಮತ್ತು ಪ್ರೋತ್ಸಾಹಿಸಲು ಖೇಲೋ ಇಂಡಿಯಾ ಯೋಜನೆ ಸಹಕಾರಿ ಎಂದು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಡಾ. ಮನ್ಸುಖ್ ಮಾಂಡವಿಯಾ ಅವರು ಹೇಳಿದರು.

ಮಂಡ್ಯದ ವಿಸಿ ಫಾರಂನಲ್ಲಿರುವ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಖೇಲೋ ಇಂಡಿಯಾ ಯೋಜನೆ ಅಡಿ 14 ಕೋಟಿ ವೆಚ್ಚದಲ್ಲಿ ವಿವಿಧೋದ್ದೇಶ ಒಳಾಂಗಣ ಕ್ರೀಡಾ ಸಂಕೀರ್ಣ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯುವ ಕ್ರೀಡಾಪಟಗುಗಳಿಗೆ ಕೇಂದ್ರ ಸರಕಾರ ಸದಾ ಬೆಂಬಲಿಸುತ್ತಿದೆ. ಅದಕ್ಕಾಗಿ ಖೇಲೋ ಇಂಡಿಯಾ ಸಹಕಾರಿಯಾಗಿದೆ ಎಂದು ತಿಳಿಸಿದರು.

ಇಂದು ಮಂಡ್ಯ ಜಿಲ್ಲೆಯಲ್ಲಿ ಯುವ ಕ್ರೀಡಾಪಟುಗಳಿಗೆ ಉತ್ತಮ ಕ್ರೀಡಾ ಸಂಕೀರ್ಣ ಅವಶ್ಯಕತೆ ಇದೆ‌.ಅದಕ್ಕಾಗಿ ಕೇಂದ್ರ ಸಚಿವರಾದ ಹೆಚ್. ಡಿ. ಕುಮಾರಸ್ವಾಮಿ ಅವರು ನನ್ನ ಬಳಿ ಮನವಿ ಮಾಡಿದ್ದರು. ಅದರ ಫಲವಾಗಿ ಇಂದು ಈ ಅಭಿವೃದ್ಧಿ ಕೆಲಸ ನೆರವೇರಿದೆ ಎಂದು ಅವರು ತಿಳಿಸಿದರು.

ಇದೇ ವೇಳೆ ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡರನ್ನು ಹೊಗಳಿದ ಮಾಂಡವಿಯಾ, ಇಳಿ ವಯಸ್ಸಿನಲ್ಲಿಯೂ ದೇವೆಗೌಡರು ಉತ್ಸಾಹ ಎಲ್ಲರಿಗೂ ಮಾದರಿ.ಸದಾ ಉತ್ಸುಕವಾಗಿ ಸದನದಲ್ಲಿ ಭಾಗಿಯಾಗುತ್ತಾರೆ ಎಂದು ಶ್ಲಾಘಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !