ಖೇಲೋ ಇಂಡಿಯಾ – 2021 ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ

ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರು:
ಕ್ರೀಡಾ ಮತ್ತು ಯುವ ಜನ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಇಂದು ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತದ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬರಮಾಡಿಕೊಂಡರು.
ಈ ಸಮಯದಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಸಚಿವ ಕೆ.ಸಿ.ನಾರಾಯಣಗೌಡ ಅವರು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ ಸ್ವಾಗತಿಸಿದರು. ಲೋಕಸಭಾ ಸಂಸದ ಪಿ.ಸಿ.ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್, ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!