ಖೋ ಖೋ ವಿಶ್ವಕಪ್‌ ನಲ್ಲಿ ಚಾಂಪಿಯನ್: ಕರ್ನಾಟಕದ ಎಂಕೆ ಗೌತಮ್, ಚೈತ್ರಾರನ್ನು ಗೌರವಿಸಿದ ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂಕೆ ಗೌತಮ್ ಹಾಗೂ ಚೈತ್ರಾ ಅವರನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌ಡಿ ಕುಮಾರಸ್ವಾಮಿ ಗೌರವಿಸಿದರು.

ದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯಕ್ಕೆ ಆಟಗಾರರಾದ ಎಂ.ಕೆ.ಗೌತಮ್ ಹಾಗೂ ಚೈತ್ರಾ, ಮತ್ತವರ ಕೋಚ್‌ಗಳಾದ ಸುಮಿತ್ ಭಾಟಿಯಾ ಹಾಗೂ ತಂಡದ ಮ್ಯಾನೇಜರ್ ರಾಜಕುಮಾರಿ ಅವರನ್ನು ಬರಮಾಡಿಕೊಂಡ ಸಚಿವರು, ಎಲ್ಲರನ್ನೂ ಗೌರವಪೂರ್ವಕವಾಗಿ ಸನ್ಮಾನಿಸಿದರು.

ಗೌತಮ್, ಚೈತ್ರಾ ಇಬ್ಬರಿಗೂ ಶುಭ ಕೋರಿದ ಸಚಿವರು, ಭಾರತದ ಪುರುಷರು ಮತ್ತು ಮಹಿಳೆಯರ ಖೋ ಖೋ ವಿಶ್ವಕಪ್ ತಂಡದಲ್ಲಿ ಅಮೋಘ ಆಟವನ್ನಾಡಿ ಭಾರತವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ನಿಮ್ಮಿಬ್ಬರಿಗೂ ನನ್ನ ಅಭಿನಂದನೆಗಳು. ಕರ್ನಾಟಕದ ಗರಿಮೆಯನ್ನು ನೀವು ಹೆಚ್ಚಿಸಿದ್ದೀರಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರದ ಸಾಧನೆಗಳನ್ನು ಮಾಡಿ ಎಂದು ಶುಭಹಾರೈಸಿದರು.

ದೇಶೀಯ ಕ್ರೀಡೆ ಖೋ ಖೋದಲ್ಲಿ ಭಾರತ ವಿಶ್ವ ಚಾಂಪಿಯನ್ ಆಗಿರುವುದಕ್ಕೆ ನಿಮ್ಮ ಜೊತೆ ತಂಡಸ್ಫೂರ್ತಿಯಿಂದ ಆಟವಾಡಿದ ಇತರೆ ಎಲ್ಲಾ ಆಟಗಾರರಿಗೂ, ನಿಮ್ಮ ತರಬೇತುದಾರರಿಗೆ ಕೂಡ ನನ್ನ ಅಭಿನಂದನೆಗಳು ಎಂದು ಹೇಳಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!