ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಅಡ್ಯಾರ್ ಗಾರ್ಡನ್ನಲ್ಲಿ ನಡೆದ ಯಕ್ಷಧ್ರುವ ಪಟ್ಲ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಖ್ಯಾತ ಚಿತ್ರನಟ ಕಿಚ್ಚ ಸುದೀಪ್ ಭಾಗವಹಿಸಿದರು.
ಈ ವೇಳೆ ವಿವಿಧ ಕ್ಷೇತ್ರಗಳ ೧೮ ಸಾಧಕರಿಗೆ ಯಕ್ಷಧ್ರುವ ಕಲಾಗೌರವ ಪ್ರದಾನ ಮಾಡಲಾಯಿತು. ಆರೋಗ್ಯ ಶಿಬಿರ, ರಕ್ತದಾನ ಶಿಬಿರ ನಡೆಯಿತು. ಉಚಿತ ಕಣ್ಣು ಪರೀಕ್ಷೆ, ಕನ್ನಡ ವಿತರಣೆ ಬೆಳಗ್ಗೆ ಚೌಕಿಪೂಜೆ, ಅಬ್ಬರ ತಾಳ, ಬಳಿಕ ಮಹಿಳಾ ಯಕ್ಷಗಾನ ನೆರವೇರಿತು.
ಸಮಾರಂಭದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಪಟ್ಲ ಫೌಂಡೇಶನ್ ಗೌರವಾಧ್ಯಕ್ಷ ಹೇರಂಭ ಕೆಮಿಕಲ್ ಇಂಡಸ್ಟ್ರಿಸ್ ಮುಂಬೈ ಇದರ ಮುಖ್ಯ ಕಾರ್ಯನಿರ್ವಹಣಾಕಾರಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ, ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.