ಬಿಗ್​ಬಾಸ್​ ಸೀಸನ್ 12ಕ್ಕೆ ಕಿಚ್ಚ ಸುದೀಪ್ ಸಾರಥ್ಯ: ಮತ್ತೆ ಯಾಕೆ ಒಪ್ಪಿಕೊಂಡೆ ಅಂದರೆ…

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿಯ ಬಿಗ್​ಬಾಸ್​ ಸೀಸನ್ 12 ನಿರೂಪಣೆ ಸಾರಥ್ಯವನ್ನು ಕಿಚ್ಚ ಸುದೀಪ್​ ಅವರೇ ವಹಿಸಿಕೊಳ್ಳುತ್ತಿದ್ದಾರೆ. ಇದು ಕಿಚ್ಚ ಸುದೀಪ್​ ಅವರ ಅಭಿಮಾನಿಗಳಿಗೆ, ಬಿಗ್​ಬಾಸ್​ ವೀಕ್ಷಕರಿಗೆ ಖುಷಿ ಕೊಟ್ಟಿದೆ.

ಇನ್ನು, ಬಿಗ್​ಬಾಸ್​ ಹೊಸ ಸೀಸನ್ ಆರಂಭಕ್ಕೆ 3-4 ತಿಂಗಳು ಬಾಕಿ ಇದೆ. ಹೀಗಿರೋವಾಗ ಬಿಗ್​ಬಾಸ್ ತಂಡ ಇಂದು ಆಯೋಜನೆ ಮಾಡಿದ ಪ್ರೆಸ್‌ ಮೀಟ್​ನಲ್ಲಿ ಮುಂದಿನ ಸೀಸನ್​ ಅನ್ನು ಕಿಚ್ಚ ಸುದೀಪ್ ಅವರೇ ನಿರೂಪಕರಾಗಿ ಮುಂದುವರೆಯಲಿದ್ದಾರೆ ಎಂದು ಅನೌನ್ಸ್​ ಮಾಡಿದೆ.

ಕಳೆದ 11ನೇ ಸೀಸನ್ ನಡೆಯುತ್ತಿರುವಾಗಲೇ ಕಿಚ್ಚ ಸುದೀಪ್ ಇದು ನಾನು ನಡೆಸಿಕೊಡುವ ಕೊನೆಯ ಸೀಸನ್ ಅಂತಾ ಅನೌನ್ಸ್ ಮಾಡಿದ್ದರು. ಕಿಚ್ಚನ ಈ ಮಾತು ಬಿಗ್‌ಬಾಸ್ ವೀಕ್ಷಕರಿಗೆ ಶಾಕ್ ನೀಡಿತ್ತು.

ಇಂದು ಸುದ್ದಿಗೋಷ್ಠಿಯಲ್ಲಿ ಮತ್ತೆ ಬಿಗ್​ಬಾಸ್​ ನಿರೂಪಣೆ ವಹಿಸೋದಕ್ಕೆ ಕಾರಣ ಏನು ಅಂತ ಬಹಿರಂಗ ಪಡಿಸಿದ್ದಾರೆ. ಈ ವೇಳೆ ಮಾತಾಡಿದ ಅವರು, ಬಿಗ್​ಬಾಸ್​ ಶುರುವಾಗುತ್ತೆ ಅಂದ್ರೆ ಅಷ್ಟೊಂದು ಜನ ನೋಡ್ತಾರೆ ಅಂದ್ರೆ ಅದಕ್ಕೆ ಅಷ್ಟು ಇಂಪಾರ್ಟೆನ್ಸ್ ಇದೆ. ಹಾಗೇ ನೋಡಿದ್ರೆ ಜನರು ನನ್ನ ಮೇಲೆ ಇಟ್ಟಿರೋ ಪ್ರೀತಿ, ಗೌರವ ಕಾಣಿಸಿದೆ. ನಾನು ವಾಪಸ್​ ಬರೋದಕ್ಕೆ ಮುಖ್ಯ ಕಾರಣ ಪ್ರತಿಯೊಬ್ಬರು ನನಗೆ ಕರೆದ ರೀತಿ ಇರಬಹುದು. ಅವರು ನನ್ನ ಮೇಲೆ ಇಟ್ಟಿರೋ ಪ್ರೀತಿ ಇರಬಹುದು. ಜನ ಅಭಿಪ್ರಾಯ, ನನ್ನ ಸ್ನೇಹಿತರು ಈ ಬಗ್ಗೆ ಹೇಳಿದ್ದು, ಬಿಗ್​ಬಾಸ್​ ಟೀಮ್ ಪದೇ ಪದೇ ಬಂತು ಮನವೊಲಿಸಿದ್ದಕ್ಕೆ ನಾನು ಇದ್ದೇನೆ ಅಂತ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!