ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಕಿಚ್ಚ ಸುದೀಪ ಇಂದಿನಿಂದ ಬಿಜೆಪಿ ಪರ ಭರ್ಜರಿ ಪ್ರಚಾರ ಆರಂಭಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಧ್ಯಾಹ್ನ ಎರಡು ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ನಡೆಯುವ ರೋಡ್‌ಶೋನಲ್ಲಿ ನಟ ಸುದೀಪ್ ಭಾಗಿಯಾಗಲಿದ್ದಾರೆ. ಇವರ ಜತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕೂಡ ಇರಲಿದ್ದಾರೆ.
ಬೆಳಗ್ಗೆ ಒಂಬತ್ತು ಗಂಟೆಗೆ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಿ, ಸ್ಪೆಷಲ್ ಜೆಟ್‌ನಲ್ಲಿ ಶಿಗ್ಗಾಂವಿ ತಲುಪಲಿದ್ದಾರೆ. ರೋಡ್‌ಶೋನಲ್ಲಿ ಸುಮಾರು ೩೦ ಸಾವಿರಕ್ಕೂ ಹೆಚ್ಚು ಮಂದಿ ಭಾಗಿಯಾಗುವ ಸಾಧ್ಯತೆ ಇದೆ. ಬಿಜೆಪಿ ಪರ ಸುದೀಪ್ ಪ್ರಚಾರ ಹೇಗಿರುತ್ತದೆ ಎಂದು ನೋಡೋದಕ್ಕೆ ಅಭಿಮಾನಿಗಳು ಕಾಯುತ್ತಿದ್ದು, ಈ ದಿನ ಅದಕ್ಕೆ ಉತ್ತರ ಸಿಗಲಿದೆ.