Sunday, June 26, 2022

Latest Posts

ಕಿಚ್ಚ ಸುದೀಪ ಅಭಿಮಾನಿಗಳಿಗೆ ನಿರಾಸೆ: ಈ ಬಾರಿಯೂ ಹುಟ್ಟುಹಬ್ಬ ಆಚರಿಸೋಲ್ಲ ಎಂದ ಕಿಚ್ಚ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಪ್ರತೀ ವರ್ಷ ಅಭಿಮಾನಿಗಳು ಕಿಚ್ಚ ಸುದೀಪ ಅವರ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಿಸುತ್ತಾರೆ.
ಮನೆ ಬಳಿ ತೆರಳಿ ಕೇಕ್ ಕತ್ತರಿಸಿ ಸಂಭ್ರಮಿಸುತ್ತಾರೆ. ಕಳೆದ ವರ್ಷದಂತೆ ಈ ಬಾರಿಯೂ ಕಿಚ್ಚ ಸುದೀಪ ತಮ್ಮ ಹುಟ್ಟುಹಬ್ಬದ ದಿನ ಮನೆಗೆ ಬಾರದಂತೆ ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ.
ಫ್ಯಾನ್ಸ್ ಜೊತೆ ಈ ಬಾರಿ ಹುಟ್ಟುಹಬ್ಬ ಮಾಡಿಕೊಳ್ಳಲು ಆಗೋದಿಲ್ಲ ಎಂದು ಸುದೀಪ್ ಈಗಲೇ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ್ದಾರೆ.
ನನ್ನೆಲ್ಲ ಸ್ನೇಹಿತ ಅಭಿಮಾನಿಗಳಲ್ಲಿ ಮನವಿ. ಕೊರೋನಾ ಕಾರಣದಿಂದ ಈ ಬಾರಿಯೂ ಯಾರನ್ನೂ ಭೇಟಿ ಆಗಲು ಆಗುತ್ತಿಲ್ಲ. ಕ್ಷಮೆ ಇರಲಿ. ಪರಿಸ್ಥಿತಿ ಸುಧಾರಿಸಿದ ನಂತರ ಸಿಗೋಣ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss