ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಕಿಚ್ಚನ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಇದೇ ಡಿಸೆಂಬರ್ 25ಕ್ಕೆ ಮ್ಯಾಕ್ಸ್ ಚಿತ್ರ ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ. ಕ್ರಿಸ್‌ಮಸ್ ಹಬ್ಬದ ವೇಳೆ, ಥಿಯೇಟರ್‌ಗೆ ಸಿನಿಮಾ ಲಗ್ಗೆ ಇಡುತ್ತಿದೆ.
ಕಾರಣಾಂತಗಳಿಂದ ‘ಮ್ಯಾಕ್ಸ್’ ಸಿನಿಮಾದ ರಿಲೀಸ್‌ಗೆ ತಡವಾಗಿತ್ತು. ಇದೀಗ ಸುದೀಪ್ ಫ್ಯಾನ್ಸ್ ಚಿತ್ರತಂಡ ಸಿಹಿಸುದ್ದಿ ಕೊಟ್ಟಿದೆ.
ಈ ಚಿತ್ರದಲ್ಲಿ ಸುದೀಪ್ ಜೊತೆ ‘ಬಿಗ್ ಬಾಸ್’ ಉಗ್ರಂ ಮಂಜು, ಸಂಯುಕ್ತಾ ಹೊರನಾಡ್, ಸುಕೃತಾ ವಾಗ್ಲೆ, ವರಲಕ್ಷ್ಮಿ ಶರತ್ ಕುಮಾರ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಚಿತ್ರವನ್ನು ವಿಜಯ್ ಕಾರ್ತಿಕೇಯ ನಿರ್ದೇಶನ ಮಾಡಿದ್ದಾರೆ.