ಅಪ್ರಾಪ್ತ ವಯಸ್ಕ ಶಾಲಾ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದ ಆರೋಪಿ ಬಂಧನ

ಹೊಸ ದಿಗಂತ ವರದಿ, ಮದ್ದೂರು :

ಫೇಸ್‌ಬುಕ್ ಮೂಲಕ ಪರಿಚಯವಾಗಿದ್ದ ಅಪ್ರಾಪ್ತ ಶಾಲಾ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ತಾಲೂಕಿನ ಕೊಪ್ಪ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಳ್ಳಾರಿ ಮೂಲದ ಗೌಸ್‌ಫೀರ್ (26) ಬಂಧಿತ ಆರೋಪಿ. 14 ವರ್ಷದ ಬಾಲಕಿಯೊಂದಿಗೆ ತಲೆಮರೆಸಿಕೊಂಡಿದ್ದ ಗೌಸ್‌ಫೀರ್‌ನನ್ನು ಚಿತ್ರದುರ್ಗದಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಮದ್ದೂರು ತಾಲೂಕು ಕೊಪ್ಪದ ಅರಗಿನಮೆಳೆ ಗ್ರಾಮದಲ್ಲಿ ಕಳೆದ ಎಂಟು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಅಪ್ರಾಪ್ತ ಮಕ್ಕಳೊಂದಿಗೆ ವಾಸವಾಗಿದ್ದರು.
ಕೊಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ಮೊಬೈಲ್‌ನ ಫೇಸ್‌ಬುಕ್‌ನಲ್ಲಿ ಚಾಟಿಂಗ್ ನಡೆಸುವ ಮೂಲಕ ಪರಿಚಯವಾಗಿದ್ದ ಗೌಸ್‌ಫೀರ್, ಕಳೆದ ಮಾ. 3ರಂದು ಬಾಲಕಿಯನ್ನು ಕೊಪ್ಪ ಗ್ರಾಮದಲ್ಲಿ ಅಪಹರಿಸಿ ಬೆಂಗಳೂರಿಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ.

ಈ ಬಗ್ಗೆ ಬಾಲಕಿ ಕಾಣೆಯಾಗಿರುವ ಬಗ್ಗೆ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ನಂತರ ತನಿಖೆ ಆರಂಭಿಸಿದ ಪೊಲೀಸರು ಮೊಬೈಲ್ ಸಂಖ್ಯೆ ಆಧಾರದ ಮೇಲೆ ಆರೋಪಿ ಗೌಸ್‌ಫೀರ್ ಮತ್ತು ಬಾಲಕಿ ಚಿತ್ರದುರ್ಗದಲ್ಲಿ ಇರುವ ಬಗ್ಗೆ ಮಾಹಿತಿ ಕಲೆಹಾಕಿ ವಶಕ್ಕೆ ತೆಗೆದುಕೊಂಡಿದ್ದಾರೆ.

ವಿಚಾರಣೆ ನಂತರ ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆರೋಪಿ ಗೌಸ್‌ಫೀರ್ ಆಕೆಯ ಮೇಲೆ ಅತ್ಯಾಚಾರ ನಡೆಸಿರುವುದು ದೃಢಪಟ್ಟಿದೆ.

ಈ ಸಂಬಂಧ ಆರೋಪಿ ವಿರುದ್ಧ ಐಪಿಸಿ 363ನೇ ಕಾಯಿದೆ ಅನ್ವಯ ಫೋಕ್ಸೋ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಬಾಲಕಿಯನ್ನು ಮಂಡ್ಯದ ಸ್ವಾದಾರ ಕೇಂದ್ರದ ವಶಕ್ಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!