ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆ.ಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಕೊನೆಗೂ ಮಧ್ಯಂತರ ಜಾಮೀನು ಸಿಕ್ಕಿದೆ.
ಇಂದು ಮಧ್ಯಾಹ್ನ ಒಂದು ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚಿಸಿದೆ. ಕೋರ್ಟ್ ವಿಚಾರಣೆಯ ಬಳಿಕ 5 ಗಂಟೆಗಳ ಕಾಲ ಮಾತ್ರ ಅವರನ್ನು ಕಸ್ಟಡಿಯಲ್ಲಿ ಇರಿಸಿಕೊಳ್ಳಬಹುದು ಎಂದು ಆದೇಶಿಸಲಾಗಿದೆ.
ಭವಾನಿ ಅವರನ್ನು ಎಸ್‌ಐಟಿ ಬಂಧಿಸಬಾರದು.,ಕೆ ಆರ್ ನಗರ ತಾಲೂಕು ಮತ್ತು ಹಾಸನಕ್ಕೆ ಭವಾನಿ ಪ್ರವೇಶಿಸಿಬಾರದು. ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಕೋರ್ಟ್ ಷರತ್ತು ವಿಧಿಸಿದೆ. ಈ ಷರತ್ತನ್ನು ಅನ್ವಯಿಸಿ ಮಧ್ಯಂತರ ಜಾಮೀನನ್ನು ಮಂಜೂರು ಮಾಡಲಾಗಿದೆ.