ಜಮ್ಮು-ಕಾಶ್ಮೀರದಲ್ಲಿ ಅಪಹರಣಕ್ಕೊಳಗಾಗಿದ್ದ ಯೋಧ ಶವವಾಗಿ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಜಮ್ಮು-ಕಾಶ್ಮೀರದ ಅನಂತನಾಗ್​ ಪ್ರದೇಶದಲ್ಲಿ ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧ ಶವವಾಗಿ ಪತ್ತೆಯಾಗಿದ್ದಾರೆ.

ಯೋದರ ದೇಹದಲ್ಲಿ ಹಲವು ಗುಂಡಿನ ಗುರುತುಗಳಿವೆ, ಅಕ್ಟೋಬರ್ 8 ರಂದು ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಆರಂಭಿಸಿದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಟೆರಿಟೋರಿಯಲ್ ಆರ್ಮಿಯ 161 ಯೂನಿಟ್‌ಗೆ ಸೇರಿದ ಇಬ್ಬರು ಸೈನಿಕರನ್ನು ಅನಂತನಾಗ್‌ನ ಅರಣ್ಯ ಪ್ರದೇಶದಿಂದ ಅಪಹರಿಸಲಾಗಿತ್ತು.

ಆದರೆ, ಅವರಲ್ಲಿ ಒಬ್ಬರು ಎರಡು ಗುಂಡಿನ ಗಾಯಗಳ ನಂತರವೂ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಮತ್ತೋರ್ವ ಯೋಧ ಬುಧವಾರ, ಅಕ್ಟೋಬರ್ 9 ರಂದು ಅನಂತನಾಗ್‌ನ ಪತ್ರಿಬಲ್ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರ ದೇಹದ ಮೇಲೆ ಗುಂಡಿನ ಗಾಯಗಳಿದ್ದು, ಶೋಧ ಕಾರ್ಯಾಚರಣೆಯ ವೇಳೆ ಪತ್ತೆಯಾಗಿದ್ದಾರೆ.

ಗಾಯಗೊಂಡ ಯೋಧನನ್ನು ಅಗತ್ಯ ಚಿಕಿತ್ಸೆಗಾಗಿ ವೈದ್ಯಕೀಯ ಸೌಲಭ್ಯಕ್ಕೆ ರವಾನಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!