Monday, October 3, 2022

Latest Posts

ಪಾಕ್ ನಲ್ಲಿ ಹಿಂದು ಯುವತಿಯರ ಅಪಹರಣ, ಮತಾಂತರ: ಸ್ಫೋಟಕ ಸತ್ಯ ಬಾಯ್ಬಿಟ್ಟ ಮಾಜಿ ಪಿಎಂ ಇಮ್ರಾನ್​ ಖಾನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಾಕಿಸ್ತಾನದಲ್ಲಿ ಹಿಂದೂ ಹುಡುಗಿಯರನ್ನು ಅಪಹರಣ ಮಾಡಿ ಬಲವಂತದಿಂದ ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಿದ್ದು, ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್​ ಖಾನ್ ಹೇಳಿಕೆ ಇದಕ್ಕೆ ಮುಖ್ಯ ಕಾರಣವಾಗಿದೆ.

ಪಾಕಿಸ್ತಾನದಲ್ಲಿ ಯುವ ಮತ್ತು ಮುಸ್ಲಿಮೇತರ ಹುಡುಗಿಯರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಲಾಗುತ್ತಿದೆ. ಹಿಂದೂ ಯುವತಿಯರನ್ನು ಅಪಹರಿಸಿ ಅವರನ್ನು ಬಲವಂತದಿಂದ ಮತಾಂತರಗೊಳಿಸಲಾಗುತ್ತಿದೆ ಎಂಬ ಭಯಾನಕ ಸತ್ಯವನ್ನು ಇಮ್ರಾನ್​ ಖಾನ್​ ಬಾಯ್ಬಿಟ್ಟಿದ್ದಾರೆ.

ಅಲ್ಪಸಂಖ್ಯಾತರ ಸಮಾವೇಶದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದ ಅವರು, ಪಾಕಿಸ್ತಾನದಲ್ಲಿ, ಅದರಲ್ಲಿಯೂ ಸಿಂಧ್​ ಪ್ರಾಂತ್ಯದ ಕಹಿ ವಾಸ್ತವವನ್ನು ಅವರು ತೆರೆದಿಟ್ಟಿದ್ದಾರೆ. ಸಿಂಧ್‌ನಲ್ಲಿ ಹಿಂದೂ ಹುಡುಗಿಯರ ಬಲವಂತದ ಮತಾಂತರ ಮಾಡುತ್ತಿದ್ದಾರೆ . ಇದನ್ನು ತಾನು ಖಂಡಿಸುತ್ತಿದ್ದೇನೆ ಎಂದಿದ್ದಾರೆ.

ಕುರಾನ್​ನಲ್ಲಿ ಮತಾಂತರದ ಕುರಿತು ಇರುವುದಾಗಿ ಹೇಳಲಾಗುತ್ತಿದೆ. ಆದರೆ ಇದು ಸತ್ಯವಲ್ಲ . ಅದರಲ್ಲಿ ಇಸ್ಲಾಂನಲ್ಲಿ ಬಲವಂತಕ್ಕೆ ಅವಕಾಶವಿಲ್ಲ. ಯಾವುದೇ ಕಾರಣಕ್ಕೂ ಬಲವಂತವಾಗಿ ಮತಾಂತರ ಮಾಡಬಾರದು ಎಂದು ಹೇಳಲಾಗಿದೆ. ಇದು ಅಲ್ಲಾಹುವಿನ ಆಜ್ಞೆಯಾಗಿದೆ. ಒಂದು ವೇಳೆ ಯಾರಾದರೂ ಮುಸ್ಲಿಮೇತರರನ್ನು ಬಲವಂತವಾಗಿ ಮತಾಂತರಿಸಿದರೆ ಅಲ್ಲಾಹುವಿಗೆಗೆ ಅವಿಧೇಯರಾಗುತ್ತಾರೆ ಎಂದು ನುಡಿದರು.

2017 ರ ಜನಗಣತಿಯ ಪ್ರಕಾರ, ಪಾಕಿಸ್ತಾನದ ಒಟ್ಟು ಜನಸಂಖ್ಯೆಯ 2 ಪ್ರತಿಶತದಷ್ಟು ಹಿಂದುಗಳು ಇದ್ದಾರೆ, ಅವರಲ್ಲಿ ಸುಮಾರು 90 ಪ್ರತಿಶತದಷ್ಟು ಜನರು ಭಾರತದ ಗಡಿಯಲ್ಲಿರುವ ಸಿಂಧ್ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದಾರೆ. ಹಿಂದು ಯುವತಿಯರನ್ನು ಅದರಲ್ಲಿಯೂ ವಿಶೇಷವಾಗಿ ಅಲ್ಪಸಂಖ್ಯಾತ ಹಿಂದು ಹುಡುಗಿಯರ ಬಲವಂತದ ಮತಾಂತರದ ಬಗ್ಗೆ ಅನೇಕ ವರದಿಗಳಿವೆ. ಆದರೆ ಪಾಕಿಸ್ತಾನದ ಸರ್ಕಾರಗಳು ಮತ್ತು ರಾಜಕಾರಣಿಗಳು ಈ ವಿಷಯದಲ್ಲಿ ಯಾವಾಗಲೂ ಮೌನವಾಗಿದ್ದಾರೆ ಮತ್ತು ಸಮಸ್ಯೆಯನ್ನು ಪರಿಹರಿಸಲು ಎಂದಿಗೂ ಕೆಲಸ ಮಾಡಲಿಲ್ಲ ಎಂದೂ ಇಮ್ರಾನ್​ ಆರೋಪಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!