ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆ.ಆರ್. ನಗರ ಸಂತ್ರಸ್ತೆ ಕಿಡ್ನ್ಯಾಪ್ ಕೇಸ್‌ನಲ್ಲಿ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ಬಂಧನಕ್ಕೆ ಕೋರ್ಟ್ ವಾರಂಟ್ ಜಾರಿ ಮಾಡಿದೆ.
ವಿಚಾರಣೆಗೆ ಆಗಮಿಸುವಂತೆ ಎಸ್ಐಟಿ ನೊಟೀಸ್ ನೀಡಿತ್ತು. ಆದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿತ್ತು. ಇದರ ಬೆನ್ನಲ್ಲೇ ಭವಾನಿ ರೇವಣ್ಣ ವಿರುದ್ಧ 42ನೇ ಎಸಿಎಂಎಂ ಕೋರ್ಟ್ ಬಂಧನ ವಾರಂಟ್ ಹೊರಡಿಸಿದೆ.
ಇತ್ತೀಚೆಗೆ ಭವಾನಿ ರೇವಣ್ಣ ಅವರನ್ನು ವಶಕ್ಕೆ ಪಡೆಯಲು ಹೊಳೆನರಸೀಪುರ ನಿವಾಸಕ್ಕೆ ತೆರಳಿದ್ದ ಎಸ್‌ಐಟಿ ಅಧಿಕಾರಿಗಳು ಸತತ 7 ಗಂಟೆ ಕಾದು ವಾಪಸ್ ಆಗಿದ್ದರು. ವಿಚಾರಣೆಗೆ ಆಗಮಿಸುವುದಾಗಿ ಹೇಳಿದ್ದ ಭವಾನಿ ರೇವಣ್ಣ ಮನೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅಧಿಕಾರಿಗಳು ವರದಿ ಮಾಡಿಕೊಂಡು ವಾಪಸ್ ತೆರಳಿದ್ದರು. ಇದೀಗ ಭವಾನಿ ರೇವಣ್ಣ ಬಂಧನಕ್ಕೆ ವಾರಂಟ್ ಪಡೆದಿದ್ದಾರೆ.