ಕಿಡ್ನಾಪ್‌ಗೂ ನನಗೂ ಸಂಬಂಧ ಇಲ್ಲ: ಎಸ್‌ಐಟಿ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸದ ರೇವಣ್ಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೈಂಗಿಕ ದೌರ್ಜನ್ಯ ಮತ್ತು ಕಿಡ್ನ್ಯಾಪ್ ಕೇಸ್​ನಲ್ಲಿ ಎಸ್​ಐಟಿ ಬಂಧನದಲ್ಲಿರುವ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ವಿಚಾರಣೆ ತೀವ್ರಗೊಂಡಿದ್ದು, ಎಸ್‌ಐಟಿ ಪ್ರಶ್ನೆಗಳಿಗೆ ರೇವಣ್ಣ ಸರಿಯಾಗಿ ಉತ್ತರಿಸಿಲ್ಲ.

ಮಹಿಳೆಯನ್ನು ಬಲವಂತವಾಗಿ ದೈಹಿಕವಾಗಿ ಬಳಸಿಕೊಂಡಿದ್ದರು ಎಂದು ಎಸ್​ಐಟಿ ಹೇಳಿಕೆ ದಾಖಲಿಸಿಕೊಂಡಿದೆ. ಆದ್ರೆ, ಎಸ್​​ಐಟಿ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡದ ರೇವಣ್ಣ, ಕಿಡ್ನ್ಯಾಪ್​​ಗೂ ನನಗೂ ಸಂಬಂಧವಿಲ್ಲ. ಕಿಡ್ನ್ಯಾಪ್ ಮಾಡಿ ಅಂತಾ ಯಾರಿಗೂ ಹೇಳಿಲ್ಲ ಅಂತಾ ಒಂದೇ ಉತ್ತರ ನೀಡಿದ್ದಾರೆ.

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಮನೆಯಿಂದ ರೇವಣ್ಣರನ್ನು ಬಂಧಿಸಿದ್ದ ಎಸ್​ಐಟಿ ನಿನ್ನೆ ಸಂಜೆ ಜಡ್ಜ್ ಎದುರು ಹಾಜರುಪಡಿಸಿತ್ತು. ಈ ವೇಳೆ ರಾಜಕೀಯ ಭವಿಷ್ಯವನ್ನು ನೆನಪಿಸಿಕೊಂಡು ರೇವಣ್ಣ ಕೈ ಮುಗಿದು ಕಣ್ಣೀರು ಹಾಕಿದ್ದರು. ರಾಜಕೀಯ ಷಡ್ಯಂತ್ರ ನಡೆಸಿ ನನ್ನ ಬಂಧನವಾಗಿದೆ ಅಂತ ಅಳಲು ತೋಡಿಕೊಂಡಿದ್ದರು.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!