ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ವಿಚಾರಣೆಗಾಗಿ ಎಸ್ಐಟಿ ಕಚೇರಿಗೆ ಹಾಜರಾಗಿದ್ದಾರೆ.
ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಹೈಕೋರ್ಟ್ ಒಂದು ವಾರದ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದ ಬೆನ್ನಲ್ಲೇ ಎಸ್ಐಟಿ ವಿಚಾರಣೆಗೆ ಭವಾನಿ ಹಾಜರಾಗಿರುವುದು ಕಂಡುಬಂದಿದೆ.
ಸಿಐಡಿಯಲ್ಲಿರುವ ಎಸ್ಐಟಿ ಕಚೇರಿಗೆ ವಕೀಲರ ಜತೆ ಭವಾನಿ ರೇವಣ್ಣ ಆಗಮಿಸಿದ್ದಾರೆ. ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ. ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದ್ದ ಹೈಕೋರ್ಟ್, ಇಂದು ಮಧ್ಯಾಹ್ನ 1 ಗಂಟೆಯೊಳಗೆ ಎಸ್ಐಟಿ (SIT) ಮುಂದೆ ಹಾಜರಾಗಬೇಕು ಎಂದು ಸೂಚನೆ ನೀಡಿತ್ತು. ಹೀಗಾಗಿ ಭವಾನಿ ರೇವಣ್ಣ ಪ್ರತ್ಯಕ್ಷವಾಗಿದ್ದಾರೆ.