Friday, February 3, 2023

Latest Posts

ಓವೈಸಿ ಪಕ್ಷದ ಸ್ಥಳೀಯ ಕಾರ್ಪೊರೇಟರ್ ಕಚೇರಿಯೊಳಗೆ ಯುವಕನ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹೈದರಾಬಾದ್‌ನ ಲಲಿತಾಬಾಗ್ ಪ್ರದೇಶದಲ್ಲಿರುವ ಅಸಾದುದ್ದೀನ್ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷದ ಸ್ಥಳೀಯ ಕಾರ್ಪೋರೇಟರ್ ಕಚೇರಿಯಲ್ಲಿ ವಿದ್ಯಾರ್ಥಿಯೊಬ್ಬನ ಹತ್ಯೆಯಾಗಿದೆ .

ಕಾರ್ಪೊರೇಟರ್ ಸಂಬಂಧಿ 22 ವರ್ಷದ ವಿದ್ಯಾರ್ಥಿಮುರ್ತಾಜಾ ಅನಸ್ ಎಂದು ಗುರುತಿಸಿದ್ದಾರೆ. ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ.

ವರದಿಗಳ ಪ್ರಕಾರ, ದಾಳಿಕೋರರು ಕಚೇರಿಗೆ ನುಗ್ಗಿ ಯುವಕನ ಮೇಲೆ ಚಾಕುವಿನಿಂದ ಹಲವಾರು ಬಾರಿ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಆತ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!