ಖಲಿಸ್ತಾನಿ ಉಗ್ರ ಹರ್ದೀಪ್ ಹತ್ಯೆ: ಕೆನಡಾ ಆರೋಪ ನಿರಾಕರಿಸಿದ ಭಾರತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಗಂಭೀರ ಆರೋಪ ಮಾಡಿದ್ದು, ಈ ಆರೋಪವನ್ನು ಭಾರತ ತಿರಸ್ಕರಿಸಿದೆ.

ನಮ್ಮದು ಪ್ರಜಾಸತ್ತಾತ್ಮಕ ದೇಶ, ಕಾನೂನಿನ ನಿಯಮಕ್ಕೆ ಬಲವಾದ ಬದ್ಧತೆಯನ್ನು ಹೊಂದಿದ್ದೇವೆ ಎಂದು ಭಾರತ ಹೇಳಿದೆ. ವಿದೇಶಾಂಗ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ಕೆನಡಾ ಮಾಡಿರುವ ಪ್ರತೀ ಆರೋಪವನ್ನು ತಿರಸ್ಕರಿಸುತ್ತೇವೆ, ಯಾವುದೇ ಹಿಂಸಾಚಾರದಲ್ಲಿ ಭಾಗಿಯಾಗಿಲ್ಲ. ಈ ಹೇಳಿಕೆ ಅಸಂಬದ್ಧವಾಗಿದೆ ಎಂದಿದ್ದಾರೆ. ನಮ್ಮ ಸಾರ್ವಭೌಮತೆ ಹಾಗೂ ಪ್ರಾದೇಶಿಕ ಸಮಗ್ರತೆಗೆ ಅಪಾಯ ಉಂಟುಮಾಡುವ ಖಲಿಸ್ತಾನಿ ಭಯೋತ್ಪಾದಕರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವಾಗುತ್ತವೆ ಎಂದು ಭಾರತ ಹೇಳಿದೆ.

ಕೆನಡಾದಲ್ಲಿ ಕೊಲೆ, ಮಾನವಕಳ್ಳಸಾಗಣೆ, ಸಂಘಟಿತ ಅಪರಾಧ ಸೇರಿದಂತೆ ಕಾನೂನುಬಾಹಿತ ಚಟುವಟಿಕೆಗಳು ನಡೆಯುತ್ತಿರುವುದು ಇದೇ ಮೊದಲೇನಲ್ಲ. ಈ ಬಗ್ಗೆ ಕೆನಡಾ ಸರ್ಕಾರ ಕ್ರಮ ಕೈಗೊಳ್ಳಬೇಕಿತ್ತು. ಆದರೆ ನಮ್ಮ ಪ್ರಧಾನಿಯವರ ಮೇಲೆ ಆರೋಪ ಮಾಡಿದ್ದು, ಸಂಪೂರ್ಣವಾಗಿ ತಿರಸ್ಕರಿಸುತ್ತೇವೆ ಎಂದಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!