ಕೆನಡಾದಲ್ಲಿ ಖಲಿಸ್ತಾನಿ ಉಗ್ರನ ಹತ್ಯೆ: ಹೊಣೆ ಹೊತ್ತುಕೊಂಡ ಬಿಷ್ಣೋಯ್‌ ಗ್ಯಾಂಗ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಸುಖದೂಲ್ ಸಿಂಗ್ (Khalistani Terrorist Sukhdool Singh) ಹತ್ಯೆಯಾಗಿದ್ದು, ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಗ್ಯಾಂಗ್‌ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದೆ.

ಈ ಸಂಬಂಧ ಪೋಸ್ಟ್‌ ಪ್ರಕಟಿಸಿದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌, ಗುರ್ಲಾಲ್ ಬ್ರಾರ್ ಮತ್ತು ವಿಕ್ಕಿ ಮಿದ್ದುಖೇರಾ ಹತ್ಯೆಯಲ್ಲಿ ಸುಖದೂಲ್ ಸಿಂಗ್ ಪ್ರಮುಖ ಪಾತ್ರವಹಿಸಿದ್ದ. ಈ ಕಾರಣಕ್ಕೆ ಆತನನ್ನು ಹತ್ಯೆ ಮಾಡಲಾಗಿದೆ ಎಂದಿದ್ದಾರೆ.

ಬುಧವಾರ ರಾತ್ರಿ ನಡೆದ ಹಿಂಸಾಚಾರದಲ್ಲಿ ಸುಖದೂಲ್ ಸಿಂಗ್‌ನನ್ನ ಹತ್ಯೆ ಮಾಡಲಾಗಿತ್ತು. ಖಲಿಸ್ತಾನ್ ಚಳವಳಿಯ ನಾಯಕನಾಗಿದ್ದ ಈತ 2017ರಲ್ಲಿ ನಕಲಿ ಪಾಸ್‌ಪೋರ್ಟ್‌ ಮೂಲಕ ಕೆನಡಾಕ್ಕೆ ಪರಾರಿಯಾಗಿದ್ದನು.

ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿಆರೋಪಿಯಾಗಿರುವ ಲಾರೆನ್ಸ್ ಬಿಷ್ಣೋಯ್ ಮಾದಕವಸ್ತು ಕಳ್ಳಸಾಗಣೆ ಆರೋಪದ ಮೇಲೆ ಅಹಮದಾಬಾದ್‌ನಲ್ಲಿ ಜೈಲಿನಲ್ಲಿದ್ದು, ಎನ್‌ಐಎ ತನಿಖೆ ನಡೆಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!