Friday, June 9, 2023

Latest Posts

ಅಪ್ರಾಪ್ತೆ ಬಾಲಕಿಯ ಹತ್ಯೆ: ಕೋಲ್ಕತ್ತಾದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋಲ್ಕತ್ತಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ, ಹತ್ಯೆ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸ್ ವಾಹನಗಳನ್ನು ಧ್ವಂಸಗೊಳಿಸಲಾಗಿದೆ.

ತಿಲಜಾಲಾ ಪ್ರದೇಶದಲ್ಲಿ ತನ್ನ ನೆರೆಹೊರೆಯವರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ 7 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

ಶ್ರೀಧರ್ ರಾಯ್ ರಸ್ತೆಯ ನಿವಾಸಿಯಾಗಿದ್ದ ಬಾಲಕಿ ಭಾನುವಾರ ಬೆಳಿಗ್ಗೆ ನಾಪತ್ತೆಯಾಗಿದ್ದಳು. ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ, ಪೊಲೀಸರು ಪ್ರದೇಶದ ಅಪಾರ್ಟ್ಮೆಂಟ್ ಬ್ಲಾಕ್‌ ನಲ್ಲಿರುವ ಫ್ಲಾಟ್‌ ವೊಂದರಲ್ಲಿ ಆಕೆಯ ಶವ ಕಂಡುಬಂದಿದೆ. ಅಧಿಕಾರಿಗಳು ಫ್ಲಾಟ್ ಮಾಲೀಕನನ್ನು ಬಂಧಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇತ್ತ ಹುಡುಗಿಯನ್ನು ಹುಡುಕುವಲ್ಲಿ ಪೊಲೀಸರು ವಿಳಂಬ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿ ತಿಲಜಾಲ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಉದ್ರಿಕ್ತಗೊಂಡ ಸ್ಥಳೀಯರು ಹಲವಾರು ವಾಹನಗಳನ್ನು ಹಾನಿಗೊಳಿಸಿದ್ದಾರೆ.
ರೈಲು ತಡೆ, ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಲಾಗಿದೆ. ಮೂರು ಪೊಲೀಸ್ ವಾಹನಗಳನ್ನು ಧ್ವಂಸಗೊಳಿಸಲಾಗಿದ್ದು, ಅವುಗಳಲ್ಲಿ ಒಂದನ್ನು ಸುಟ್ಟು ಹಾಕಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!