ಕಳೆದ ಮೂರು ವರ್ಷದಲ್ಲಿ ಒಂಬತ್ತು ಕಾಶ್ಮೀರಿ ಪಂಡಿತರ ಹತ್ಯೆ: ಕೇಂದ್ರ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಮೂರು ವರ್ಷದಲ್ಲಿ ಒಂಬತ್ತು ಕಾಶ್ಮೀರಿ ಪಂಡಿತರನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ.

2020 ರಲ್ಲಿ ಒಬ್ಬರು ಹಾಗೂ 2022ರಲ್ಲಿ ನಾಲ್ವರು ಕಾಶ್ಮೀರಿ ಪಂಡಿತರು ಸೇರಿದಂತೆ ಕಳೆದ ಮೂರು ವರ್ಷಗಳಲ್ಲಿ ಒಟ್ಟು 9 ಕಾಶ್ಮೀರಿ ಪಂಡಿತರನ್ನು ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಮಾಹಿತಿ ನೀಡಿದ್ದಾರೆ.

ಉಗ್ರರಿಂದ ಹತ್ಯೆಯಾದವರಲ್ಲಿ ಕಾಶ್ಮೀರಿ ರಜಪೂತ ಸಮುದಾಯಕ್ಕೆ ಸೇರಿದ ವ್ಯಕ್ತಿಯೂ ಸೇರಿದ್ದಾರೆ .

ಅದೇ ರೀತಿ ಕಳೆದ ಮೂರು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಗಾಗಿ ಕೇಂದ್ರ ಗೃಹ ಸಚಿವಾಲಯ ಸುಮಾರು 2,815 ಕೋಟಿ ರೂ. ಖರ್ಚು ಮಾಡಿದೆ ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!