March 19, 2026
Thursday, March 19, 2026
spot_img

ಹೊಸ ಲುಕ್‌ನಲ್ಲಿ ಕಿಂಗ್ ಕೊಹ್ಲಿ ಎಂಟ್ರಿ: ಉಳಿದವರೇನು ಕಡಿಮೇನಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಐಪಿಎಲ್ ಸೀಸನ್‌ಗೆ ಸಜ್ಜಾಗುತ್ತಿದ್ದು, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಂಡವನ್ನು ಸೇರಿಕೊಂಡಿದ್ದಾರೆ. ತರಬೇತಿ ಶಿಬಿರ ಆರಂಭವಾದ ಹಿನ್ನೆಲೆಯಲ್ಲಿ ಕೊಹ್ಲಿ ಮೊದಲನೇ ದಿನವೇ ನೆಟ್ಸ್‌ನಲ್ಲಿ ಅಭ್ಯಾಸ ನಡೆಸಿದ್ದು, ಅಭಿಮಾನಿಗಳಲ್ಲಿ ಉತ್ಸಾಹ ಮೂಡಿಸಿದೆ.

ಈ ಬಾರಿ ಕೊಹ್ಲಿ ವಿಭಿನ್ನ ಹೇರ್‌ಸ್ಟೈಲ್‌ನೊಂದಿಗೆ ಕಾಣಿಸಿಕೊಂಡಿದ್ದು, ಅವರ ಹೊಸ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊಹ್ಲಿ ಜೊತೆಗೆ ಉಳಿದ ಟೀಮ್ ನ ಆಟಗಾರರು ಕೂಡ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಆರ್‌ಸಿಬಿ ಹಂಚಿಕೊಂಡ ಚಿತ್ರಗಳಲ್ಲಿ ಕೊಹ್ಲಿ ಸಂಪೂರ್ಣವಾಗಿ ಬದಲಾಗಿರುವಂತೆ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಅದನ್ನು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ:

ಕಳೆದ ಕೆಲವು ಸೀಸನ್‌ಗಳಲ್ಲಿ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ತಂಡದ ಯಶಸ್ಸಿಗೆ ಪ್ರಮುಖ ಕಾರಣರಾಗಿದ್ದರು. ಇದೇ ಫಾರ್ಮ್ ಈ ಬಾರಿಯೂ ಮುಂದುವರಿಯಲಿ ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿದೆ.

ಪ್ರಸಕ್ತ ಐಪಿಎಲ್ ಟೂರ್ನಿ ಮಾರ್ಚ್ 28ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿದ್ದು, ಕೊಹ್ಲಿ ಪ್ರದರ್ಶನದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !