September 29, 2026
Tuesday, September 29, 2026
spot_img

ರಾಂಚಿಯಲ್ಲಿ ಕಿಂಗ್ ಕೊಹ್ಲಿ ಬೊಂಬಾಟ್ ಬ್ಯಾಟಿಂಗ್: ವಿರಾಟ್ ಶತಕದ ಆಟಕ್ಕೆ ಅಭಿಮಾನಿಗಳು ಫಿದಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 52ನೇ ಏಕದಿನ ಶತಕ ಸಿಡಿಸಿ ಮಿಂಚಿದ್ದಾರೆ.

ಆರಂಭದಿಂದಲೂ ಆಕ್ರಮಣಕಾರಿಯಾಗಿ ಬ್ಯಾಟ್ ಬೀಸಿದ ವಿರಾಟ್ ಕೊಹ್ಲಿ ಕೇವಲ 48 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಅಷ್ಟೇ ಸಿಕ್ಸರ್‌ಗಳೊಂದಿಗೆ ಅರ್ಧಶತಕ ಪೂರೈಸಿದರು. ಬೌಂಡರಿ ಬಾರಿಸುವ ಮೂಲಕ ತಮ್ಮ ಶತಕವನ್ನು ಪೂರ್ಣಗೊಳಿಸಿದ ಕೊಹ್ಲಿ, ಈ ಶತಕದ ಮೂಲಕ ತಮ್ಮನ್ನು ಟೀಕಿಸುತ್ತಿದ್ದವರಿಗೆ ಹಾಗೂ ಆಯ್ಕೆ ಮಂಡಳಿಗೆ ತಕ್ಕ ಉತ್ತರ ನೀಡಿದರು.

ವಾಸ್ತವವಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿ ನಡೆದ ಏಕದಿನ ಸರಣಿಯೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ್ದ ಕೊಹ್ಲಿ, ಸರಣಿಯಲ್ಲಿ ಅಷ್ಟೇನೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಮೊದಲೆರಡು ಪಂದ್ಯಗಳಲ್ಲಿ ಸೊನ್ನೆ ಸುತ್ತಿದ್ದ ಕೊಹ್ಲಿ ಕೊನೆಯ ಪಂದ್ಯದಲ್ಲಿ ಅಜೇಯ ಅರ್ಧಶತಕ ಬಾರಿಸಿದ್ದರು. ಹೀಗಾಗಿ ಕೊಹ್ಲಿಯ ಮೇಲೆ ಟೀಕಾ ಪ್ರಹಾರವೇ ನಡೆದಿತ್ತು. ಆದರೆ ಆ ಎಲ್ಲಾ ಟೀಕೆಗಳಿಗೂ ರಾಂಚಿಯಲ್ಲಿ ಉತ್ತರ ನೀಡಿದ ಕೊಹ್ಲಿ, ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅದ್ಭುತ ಶತಕ ಬಾರಿಸಿದರು.

Must Read