ಪಾಕ್ ಮಾಜಿ ನಾಯಕ ಬಾಬರ್ ಆಝಂ ಆರ್ಭಟಕ್ಕೆ ಕಿಂಗ್ ಕೊಹ್ಲಿ ವಿಶ್ವ ದಾಖಲೆ ಉಡೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಕದಿನ ಕ್ರಿಕೆಟ್​ನಲ್ಲಿ ಬಾಬರ್ ಆಝಂ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ. ಅಂದರೆ ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 6000 ರನ್​ ಕಲೆಹಾಕಿದ ವರ್ಲ್ಡ್ ರೆಕಾರ್ಡ್ ಇದೀಗ ಬಾಬರ್ ಪಾಲಾಗಿದೆ.

ಕರಾಚಿಯಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ 29 ರನ್ ಬಾರಿಸಿದ್ದರು. ಈ 29 ರನ್​ಗಳೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ 6 ಸಾವಿರ ರನ್ ಪೂರೈಸಿದ್ದಾರೆ.

ಈ ಮೂಲಕ ಒಡಿಐ ಇತಿಹಾಸದಲ್ಲೇ ಅತೀ ವೇಗವಾಗಿ ಆರು ಸಾವಿರ ರನ್ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!