ಹೊಸದಿಗಂತ ಡಿಜಿಟಲ್ ಡೆಸ್ಕ್;
ಏಕದಿನ ಕ್ರಿಕೆಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಗಳನ್ನು ನಿರಂತರವಾಗಿ ಮುರಿಯುತ್ತಿರುವ ವಿರಾಟ್ ಕೊಹ್ಲಿ, ಇದೀಗ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಪಂದ್ಯದಲ್ಲೂ ಮಾಸ್ಟರ್ ಬ್ಲಾಸ್ಟರ್ ಅವರ ಮತ್ತೊಂದು ದಾಖಲೆಯನ್ನು ಮುರಿದಿದ್ದಾರೆ.
ಕೇವಲ ಒಂದು ರನ್‌ನೊಂದಿಗೆ, ಕೊಹ್ಲಿ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿ ನ್ಯೂಜಿಲೆಂಡ್ ವಿರುದ್ಧ ಅತಿ ಹೆಚ್ಚು ಏಕದಿನ ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.
ಸಚಿನ್ ತೆಂಡೂಲ್ಕರ್ ನ್ಯೂಜಿಲೆಂಡ್ ವಿರುದ್ಧ 42 ಏಕದಿನ ಪಂದ್ಯಗಳಲ್ಲಿ 1750 ರನ್ ಗಳಿಸಿದ್ದರು. ಈ ಸರಣಿಯ ಆರಂಭಕ್ಕೂ ಮುನ್ನ ಸಚಿನ್ ದಾಖಲೆಯನ್ನು ಸರಿಗಟ್ಟಲು ವಿರಾಟ್ ಕೊಹ್ಲಿಗೆ 93 ರನ್‌ಗಳ ಅಗತ್ಯವಿತ್ತು. ವಿರಾಟ್ ಕೊಹ್ಲಿ ವಡೋದರಾದಲ್ಲಿ ನಡೆದಿದ್ದ ಮೊದಲನೇ ಏಕದಿನ ಪಂದ್ಯದಲ್ಲಿ 93 ರನ್ ಗಳಿಸುವ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಕೊಹ್ಲಿ ಸರಿಗಟ್ಟಿದರು. ವಡೋದರಾ ಪಂದ್ಯದ ನಂತರ, ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ಆಡಿದ 34 ಏಕದಿನ ಪಂದ್ಯಗಳಲ್ಲಿ ಗಳಿಸಿದ ಮೊತ್ತ 1750 ರನ್‌ಗಳಿಗೆ ತಲುಪಿದ್ದರು. ಇದರೊಂದಿಗೆ, ಇಬ್ಬರೂ ದಂತಕಥೆಯ ಕ್ರಿಕೆಟಿಗರು ನಂಬರ್ 1 ಸ್ಥಾನವನ್ನು ಹಂಚಿಕೊಂಡಿದ್ದಾರೆ. ಆದರೆ, ರಾಜ್‌ಕೋಟ್ ಏಕದಿನ ಪಂದ್ಯದಲ್ಲಿ ತಮ್ಮ ಮೊದಲ ರನ್‌ನೊಂದಿಗೆ ವಿರಾಟ್ ಕೊಹ್ಲಿ ಸಚಿನ್ ತೆಂಡೂಲ್ಕರ್ ಅವರನ್ನು ಎರಡನೇ ಸ್ಥಾನಕ್ಕೆ ತಳ್ಳಿದ್ದಾರೆ.


